

ಕಲಬುರಗಿ: ವಿದ್ಯಾರ್ಥಿ ಜೀವನದಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದೆ. ಈ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕು ರೂಪಿಸಿಕೊಳ್ಳಬಹುದು. ಪ್ರಸ್ತುತ ಸಮಾಜದಲ್ಲಿ ಸ್ವಾವಲಂಬಿ ಬದುಕಿಗೆ ಪ್ರಾಧಾನ್ಯತೆ ನೀಡಬೇಕು ಎಂದು ಉದ್ಯಮಿ ಸಂತೋಷಕುಮಾರ್ ಜಾವಳಿ ಹೇಳಿದರು.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಲಿಂಕಡಿನ್ ಪ್ರೊಫೈಲ್ ಬಿಲ್ಡಿಂಗ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಾವು ಸ್ವಾಲಂಭಿಯಾಗಿ ಸಮಾಜದಲ್ಲಿ ಉದ್ಯೋಗ ಅವಕಾಶ ಸೃಷ್ಟಿಸಬಹುದು ಎಂದರು.
ಸಂಪನ್ಮೂಲ ವ್ಯಕ್ತಿ ಆಕಾಶ ಟೋಣಶೆಲ್ಲಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಅವಕಾಶ ಜನಸಂಖ್ಯೆಯ ಅನುಗುಣವಾಗಿ ಲಭ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಸ್ವಯಂ ಉದ್ಯೋಗ ಮಾಡುವುದು ಅನಿವಾರ್ಯ. ತಂತ್ರನದಿಂದಾಗಿ ಜೀವನ ಸುಲಭ, ಜತೆಗೆ ಅಭಿವೃದ್ಧಿಯೂ ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿ.ಜಿ.ಮಹಿಳಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗ ಮತ್ತು ಡಿಜಿಷೇರ್ ಟೆಕ್ನಾಲಜಿ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಬಿ.ಕೊಂಡ ಮಾತನಾಡಿ, ಸಮಾಜದ ಏಳಿಗೆಗಾಗಿ ಸ್ವಯಂ ಉದ್ಯೋಗದೊಂದಿಗೆ ವಾಣಿಜ್ಯೋದಮಿಯಾಗುವುದು ಒಳಿತು ಎಂದು ಸಲಹೆ ನೀಡಿದರು.
ಕಾಲೇಜಿನ ಉಪ ಪ್ರಾಂಶುಪಾಲ, ವಾಣಿಜ್ಯ ವಿಭಾಗದ ಮುಖ್ಯಸ್ಥರೂ ಆದ ಕಾರ್ಯಾಗಾರದ ಸಂಯೋಜಕಿ ಉಮಾ ರೇವೂರ್ ಸ್ವಾಗತಿಸಿದರು. ಶ್ವೇತಾ ಕೋಟೆ ಅತಿಥಿ ಪರಿಚಯ ಮಾಡಿದರು. ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಸಾಕ್ಷಿ ಪಾಟೀಲ್ ಪ್ರಾರ್ಥಿಸಿದರು. ಡಾ.ಸ್ವಪ್ನಾ ಶೇರಿಕಾರ್ ನಿರೂಪಿಸಿದರು. ಪ್ರಮಿಳಾ ತೋರಣ ವಂದಿಸಿದರು.