

ಹುಬ್ಬಳ್ಳಿ: ವೆಂಕಟೇಶ ಅಶೋಕ ಕಾಟವೆ ಫೌಂಡೇಷನ್ ವತಿಯಿಂದ ಟ್ರಾಫಿಕ್ ಪೊಲೀಸರಿಗೆ ಮಂಗಳವಾರ ನೀರು, ಮಜ್ಜಿಗೆ ಹಾಗೂ ಹಣ್ಣುಗಳನ್ನು ಒಳಗೊಂಡ ತಂಪು ಪಾನೀಯ ಕಿಟ್ ವಿತರಿಸಲಾಯಿತು.
ಚನ್ನಮ್ಮ ವೃತ್ತ, ಸರ್ ಸಿದ್ದಪ್ಪ ಕಂಬಳಿ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ವೀರ ಸಂಗೊಳ್ಳಿ ರಾಯಣ್ಣ ವೃತ್ತ, ಹೊಸೂರ, ವಿದ್ಯಾನಗರ, ಬಸ್ ಸ್ಟ್ಯಾಂಡ್ ಅಕ್ಕ ಪಕ್ಕದಲ್ಲಿ ಕರ್ತವ್ಯನಿರತ ಪೊಲೀಸ್ರಿಗೆ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ ಕಾಟವೆ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಏರುತ್ತಿದೆ. ಇದರ ನಡುವೆಯೂ ಟ್ರಾಫಿಕ್ ಪೊಲೀಸರು ಕರ್ತವ್ಯ ನಿರ್ವಹಿಸಬೇಕಿದೆ. ಸುಗಮ ಸಂಚಾರಕ್ಕಾಗಿ ಶ್ರಮಿಸುತ್ತಿದ್ದಾರೆ. ಅಂಥವರಿಗೆ ತಂಪು ಪಾನೀಯ ಕಿಟ್ ನೀಡಿ ಅಳಿಲು ಸೇವೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ಪೊಲೀಸರಿಗೆ ಉತ್ತಮ ದರ್ಜೆಯ ಮಾಸ್ಕ್ ವಿತರಿಸುವ ಉದ್ದೇಶ ಹೊಂದಿದ್ದೇವೆ. ಈಗಾಗಲೇ ಫೌಂಡೇಷನ್ನಿಂದ ಸಾರ್ವಜನಿಕ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.
ಫೌಂಡೇಷನ್ ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.