ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯ!...

ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯ!...
Published on

ಹಾಸನ : ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ತೈಮಾಸ್ರಿಕ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ನಿಷೇಧಿಸಿರುವ ಬಗ್ಗೆ ನಾಮಫಲಕ ಅಳಡಿಸುವುದರ ಜೊತೆಗೆ ನಿಷೇಧಿತ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕ್ರಮವಹಿಸಲು ತಿಳಿಸಿದರು.
ಜಿಲ್ಲಾದ್ಯಾಂತ ಎಲ್ಲಾ ಶಾಲೆಗಳಲ್ಲಿ ಜ.9 ರಂದು ಗುಲಾಬಿ ಆಂದೋಲನ ಹಮ್ಮಿಕೊಂಡು ಮಕ್ಕಳು ಸಾರ್ವಜನಿಕರಿಗೆ ಗುಲಾಬಿ ಹೂ ನೀಡುವ ಮೂಲಕ  ತಂಬಾಕು ಉತ್ಪನ್ನಗಳನ್ನು ಸೇವಿಸದಂತೆ ಅರಿವು ಮೂಡಿಸಲು ಹೇಳಿದರು. ಸಾರ್ವಜನಿಕರು ಮುನೆಚ್ಚರಿಕೆಯಾಗಿ ಪ್ರಾಥಮಿಕ ಆರೋಗ್ಯ ಕೆಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ  ಖುದ್ದಾಗಿ ಹೋಗಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳುವಂತೆ  ತಿಳಿಸಿದರು.
ಸರ್ಕಾರಿ ನೌಕರರಿಗೆ ಬೂಸ್ಟರ್ ಡೋಸ್ ನೀಡಲು ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ,ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಲ್ಲಿ 2 ರಿಂದ 3 ದಿನ ವಿಶೇಷ ಲಸಿಕಾ ಬೂತ್ ತೆರೆದು ಬೂಸ್ಟರ್ ಡೋಸ್ ನೀಡಲಾಗುವುದು. ಕಡ್ಡಾಯವಾಗಿ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿದರು.

ರೇಬಿಸ್ ತಡೆಗಟ್ಟುವ ನಿಟ್ಟಿನಲ್ಲಿ ನಾಯಿ ಕಚ್ಚಿದಾಗ ಉದಾಸಿನ ಮಾಡದೆ ತಕ್ಷಣ ಚುಚುಮದ್ದು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಹೆಚ್ಚು ಪ್ರಕರಣಗಳು ಕಂಡು ಬಂದಿರುವ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ನಾಯಿಗಳ ಸಂತಾನ ನಿಯಂತ್ರಣಕ್ಕೆ ಕ್ರಮವಹಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಆವರು ಮಾತನಾಡಿ, ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಈಗಾಗಲೇ ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ತಂಡಗಳು ಕಾರ್ಯಾಚರಣೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವಂತೆ ತಿಳಿಸಿದರು.
ಅಂತರ್ ಇಲಾಖೆ ಸಹಯೋಗದಲ್ಲಿ ಹವಮಾನ ಬದಲಾವಣೆಯಿಂದ ಬರುವ ಕಾಯಿಲೆಗಳ ಬಗ್ಗೆ ಎಚ್ಚರಿಕೆ ವಹಿಸಲು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ  ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಕಾಂತ್,ಹಿಮ್ಸ್ ನಿರ್ದೇಶಕ ಡಾ. ರವಿಕುಮಾರ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಸ್ವಾಮಿ, ಜಿಲ್ಲಾ ಶಸ್ತ್ರಚಿತ್ಸಕ ಡಾ ಸತೀಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಮಹಾಲಿಂಗಯ್ಯ, ಆರ್.ಸಿ ಎಚ್. ಅಧಿಕಾರಿ ಡಾ.ಚೇತನ್ ,ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net