ತಂಬಾಕು ತ್ಯಜಿಸಿ ಆರೋಗ್ಯವಾಗಿರಿ

31 yerriswamy 09
Published on

ಬಳ್ಳಾರಿ : ತಂಬಾಕು ತ್ಯಜಿಸಿ ಸದೃಢ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ರಾಜೇಶ್ ಹೊಸಮನೆ ಹೇಳಿದರು. ನಗರದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಜಿಲ್ಲಾಸ್ಪತ್ರೆ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಹಾಗೂ ಗುಲಾಬಿ ಆಂದೋಲನ ಅಂಗವಾಗಿ ಶುಕ್ರವಾರ ನಡೆದ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ರಾಷ್ಟ್ರ ಕಟ್ಟುವಲ್ಲಿ ಯುವ ಪೀಳಿಗೆಯ ಪಾತ್ರ ಬಹಳ ಮುಖ್ಯವಾಗಿದ್ದು, ಯುವಕರು ತಂಬಾಕು ಪದಾರ್ಥಗಳಿಗೆ ಬಲಿಯಾಗದೇ, ಅವುಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಡಿಎಚ್‌ಒ ಡಾ.ವೈ. ರಮೇಶಬಾಬು ಮಾತನಾಡಿ, ಧೂಮಪಾನ ಮಾಡುವವರಿಗಿಂತ ಹೆಚ್ಚಾಗಿ ಅಸುಪಾಸು ಇರುವವರು ಹೊಗೆ ಸೇವನೆಯಿಂದಲೇ ಅತ್ಯಂತ ಪರಿಣಾಮ ಬೀರುತ್ತದೆ. ಹಾಗಾಗಿ ಧೂಮಪಾನ ಸೇವನೆ ಮಾಡುವರು ಮನೆಯಲ್ಲಿ ಹಾಗೂ ಸಾರ್ವಜನಿಕರ ಸ್ಥಳಗಳಲ್ಲಿ ಧೂಮಪಾನ ಸೇವನೆ ಮಾಡದಂತೆ ಎಚ್ಚರವಹಿಸಬೇಕು ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ , ಜಿಲ್ಲಾ ತಂಬಾಕು ನಿಯಂತ್ರಣಾ ಕೋಶದ ನಿಯಂತ್ರಣಾಧಿಕಾರಿ ಡಾ.ಮರಿಯಂಬಿ ಮಾತನಾಡಿದರು. ಜಾಥಾ ಮಾರ್ಗ ಮಧ್ಯೆದಲ್ಲಿ ಗುಲಾಬಿ ಆಂದೋಲನ ಅಂಗವಾಗಿ ಸಾರ್ವಜನಿಕರಿಗೆ ಗುಲಾಬಿ ಹೂ ವಿತರಿಸಲಾಯಿತು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net