ತಂಬಾಕು ಮುಕ್ತ ಜಿಲ್ಲೆಯಾಗಿಸೋಣ

IMG-20221009-WA0058--05
Published on

ಚಿತ್ರದುರ್ಗ: ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸಲಹೆ ನೀಡಿದರು.

ಎಸ್‌ಪಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಸಂಬಂಧ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಪೊಲೀಸ್ ಅಧಿಕಾರಿಗಳು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಕಾಯ್ದೆ ಸಫಲತೆಗೆ ಇನ್ನಷ್ಟು ದಾಳಿ ಹೆಚ್ಚಿಸಬೇಕು. ನಾಗರಿಕರ ಸಹಕಾರ ಮುಖ್ಯವಾಗಿದ್ದು, ಮನವೊಲಿಸಲು ಮುಂದಾಗಬೇಕು ಎಂದರು.

ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ ಅವರು, ಕಾಯ್ದೆಯ ಸಂಪೂರ್ಣ ಮಾಹಿತಿ ಹಂಚಿಕೊಂಡರು. ಸಾಮಾಜಿಕ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, 30ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net