ತಂಬಾಕು ಮುಕ್ತದಿಂದ ಆರೋಗ್ಯವಂತ ಸಮಾಜ ನಿರ್ಮಾಣ

03-GPT-2
Published on

ಗುಂಡ್ಲುಪೇಟೆ: ಆರೋಗ್ಯವಂತ ಸಮಾಜಕ್ಕಾಗಿ ಪ್ರತಿಯೊಬ್ಬರೂ ರೋಗಗಳಿಂದ ಮುಕ್ತರಾಗಬೇಕಾಗಿದೆ ಎಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ್ ಹೇಳಿದರು.


ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಿಶ್ವ ತಂಬಾಕು ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆ ಹಾಗೂ ವಕೀಲರ ಸಂಘ ಶನಿವಾರ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಯುವಜನತೆ ಫ್ಯಾಷನ್‌ಗಾಗಿ ಆರಂಭಿಸಿದ ಧೂಮಪಾನ ಅವರ ಜೀವನವನ್ನೇ ಬಲಿ ತೆಗೆದುಕೊಳ್ಳುತ್ತಿದೆ. ಧೂಮಪಾನದಿಂದ ಪ್ರತಿ ವರ್ಷವೂ ಕೋಟ್ಯಾಂತರ ಜನರು ಸಾವಿಗೀಡಾಗುತ್ತಿದ್ದು, ಹೊಗೆ ಸೇವಿಸಿದವರೂ ಅನಾರೋಗ್ಯಕ್ಕೊಳಗಾಗುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಬಳಕೆ ನಿಷೇಧಿಸಿ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ವಿರೋಧಿ ದಿನಾಚರಣೆ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದೆ ಎಂದು ಹೇಳಿದರು.


ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಜೆ.ಜೆ.ಶಿವಕುಮಾರ್, ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಕಾಂತಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಗಿರಿದಾಸ್, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅರುಣ್, ಸರ್ಕಲ್ ಇನ್ಸ್‌ಪೆಕ್ಟರ್ ಮುದ್ದರಾಜ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net