ತಕ್ಕ ಉತ್ತರ ನೀಡುತ್ತಿದೆ ಭಾರತೀಯ ಸೇನೆ

Published on

ಹುಬ್ಬಳ್ಳಿ: ಉಗ್ರರನ್ನು ಪೋಷಣೆ ಮಾಡುತ್ತ ಬಂದಿರುವ ಪಾಕಿಸ್ತಾನಕ್ಕೆ ನಮ್ಮ ಭಾರತೀಯ ಸೇನೆ ಕಳೆದ ಎರಡು ದಿನಗಳಿಂದ ಉತ್ತರ ನೀಡುತ್ತಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ ಎಂದು ವಿಎಕೆ ಫೌಂಡೇಷನ್ ಸಂಸ್ಥಾಪಕ ಹಾಗೂ ಯುವ ಮುಖಂಡ ವೆಂಕಟೇಶ ಕಾಟವೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ನಿಖರವಾಗಿ ಟಾರ್ಗೆಟ್ ಮಾಡುವ ಮೂಲಕ ನೂರಾರು ಉಗ್ರರನ್ನು ನರಕಕ್ಕೆ ಕಳಿಸುವ ಮೂಲಕ ಭಯೋತ್ಪಾದನೆ ಪೋಷಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸ್ಪಷ್ಟವಾದ ಸಂದೇಶವನ್ನು ಭಾರತೀಯ ಸೇನೆ ನೀಡಿದೆ. ಈ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ ಎಂದು ಪ್ರಶಂಸಿಸಿದ್ದಾರೆ.

ಆಪರೇಷನ್ ಸಿಂಧೂರ ದಾಳಿಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರರು ಎಲ್ಲೇ ಇದ್ದರೂ ಹುಡುಕಿ ಹೊಡೆಯುತ್ತೇವೆ ಎಂಬ ಮಾತಿಗೆ ಬದ್ಧವಾಗಿ ನಡೆದುಕೊಂಡಿದ್ದಾರೆ. ಯುದ್ಧದಲ್ಲಿ ಪಾಲ್ಗೊಂಡಿರುವ ಸೈನಿಕರಿಗೆ ತಾಯಿ ಚಾಮುಂಡೇಶ್ವರಿ ಹೆಚ್ಚಿನ ಶಕ್ತಿ ಕರುಣಿಸಲಿ ಎಂದು ಕಾಟವೆ ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net