

ಚಿತ್ರದುರ್ಗ: ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಮತ್ತು ಪಪೂ ಕಾಲೇಜಿನ ತಡೆಗೋಡೆ ತೆರವುಗೊಳಿಸಿರುವ ಕ್ರಮ ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಕಾಲೇಜಿನ ಮುಂಭಾಗದ ಬಿ.ಡಿ.ರಸ್ತೆಯಲ್ಲಿ ಅರ್ಧ ತಾಸಿಗೂ ಅಧಿಕ ಹೊತ್ತು ರಸ್ತೆ ತಡೆ ನಡೆಸಿದರು. ಇದರಿಂದಾಗಿ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತವಾಯಿತು. ತೆರವುಗೊಳಿಸಿದ್ದಕ್ಕೆ ನಗರಸಭೆ, ಪಿಡಬ್ಲುೃಡಿ, ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ತೆರವುಗೊಳಿಸಿದ ನಂತರ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ತಡೆಗೋಡೆ ನಿರ್ಮಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು.
ಸಂಘಟನೆ ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಜಿಲ್ಲಾ ಅಧ್ಯಕ್ಷೆ ವೀಣಾ ಗೌರಣ್ಣ, ಪದಾಧಿಕಾರಿಗಳಾದ ರತ್ನಮ್ಮ, ಜಗದೀಶ್, ವಿಶ್ವನಾರಾಯಣಮೂರ್ತಿ, ಹರೀಶ್, ಅಖಿಲೇಶ್, ಗೋಪಿನಾಥ್, ಪ್ರದೀಪ್, ಅವಿನಾಶ್, ಜಾಕೀರ್ ಹುಸೇನ್ ಇತರರಿದ್ದರು.