ತಡೆಗೋಡೆಯಿಂದ ಪಾರಾದ ಪ್ರವಾಸಿಗರು

23 yelandur 03
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟಕ್ಕೆ ತೆರಳುವ ಗವಿಬೋರೆ ಬಳಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಬಸ್ ಮತ್ತು ಕಾರು ಡಿಕ್ಕಿ ಹೊಡೆದು ನಿಂತಿರುವುದು.
Published on

ಯಳಂದೂರು: ಬಿಳಿಗಿರಿರಂಗನಬೆಟ್ಟ ಸಮೀಪದಲ್ಲಿ ಭಾನುವಾರ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದ್ದು ಅದೃಷ್ಟವಶಾತ್ ಬಸ್ಸು ಹಾಗೂ ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಿಳಿಗಿರಿರಂಗನಬೆಟ್ಟದಿಂದ ಯಳಂದೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಯಳಂದೂರಿನಿಂದ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಗವಿಬೋರೆ ಬಳಿ ಅಪಘಾತವಾಯಿತು. ಬಸ್ ತಡೆಗೋಡೆ ಆಶ್ರಯಿಸಿ ನಿಂತ ಪರಿಣಾಮ ಇದರಲ್ಲಿದ್ದ 60 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net