ತನಿಖೆ ಚುರುಕುಗೊಳಿಸಿದ ಸಿಬಿಐ

Yogesh Goudar 1
Published on

ಧಾರವಾಡ: ಜಿಪಂ ಸದಸ್ಯನಾಗಿದ್ದ ಯೋಗೀಶಗೌಡ ಕೊಲೆ ತನಿಖೆ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ನಗರದಲ್ಲೇ ಬೀಡು ಬಿಟ್ಟಿರುವ ಸಿಬಿಐ ಅಧಿಕಾರಿಗಳು ಶುಕ್ರವಾರವೂ ಪೊಲೀಸ್ ಅಧಿಕಾರಿ ಸೇರಿ ಹಲವರ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಾಥಮಿಕ ಚಾರ್ಜ್​ಶೀಟ್​ನಲ್ಲಿ ಹೆಸರಿಸಲಾಗಿರುವ 6 ಆರೋಪಿಗಳ ಮರು ವಿಚಾರಣೆ ಜತೆಗೆ ಕೊಲೆ ನಡೆದ ಸಂದರ್ಭದಲ್ಲಿ ಉಪನಗರ ಠಾಣೆ ಪೊಲೀಸ್ ಇನ್​ಸ್ಪೆಕ್ಟರ್ ಆಗಿದ್ದ ಮೋತಿಲಾಲ್ ಪವಾರ್ ಅವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ. ಜತೆಗೆ ಇನ್ನೂ ಕೆಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು, ಕೆಲ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೆ ನಿಕಟ ಸಂಪರ್ಕ ಹೊಂದಿರುವ ಹಾಗೂ ಅವರ ಕೆಲ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದವರನ್ನೂ ಕರೆಯಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net