

ಹುಬ್ಬಳ್ಳಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಹಗರಣವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆ ನಡೆಸಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಪೂರ್ವ ಘೊಷಿಸಿದ ಗ್ಯಾರಂಟಿ ಯೋಜನೆಗಳನ್ನು ಪ್ರಥಮ ಸಚಿವ ಸಂಪುಟ ಸಭೆಯಲ್ಲಿ ಜಾರಿ ಮಾಡಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಈಗ ತಾತ್ವಿಕ ಒಪ್ಪಿಗೆ ಕೊಟ್ಟಿದ್ದಾರೆ ಅಷ್ಟೇ. ಕೊಟ್ಟ ಭರವಸೆಗಳನ್ನು ಈಡೇರಿಸಲು ಅವರಿಗೆ ಆಸಕ್ತಿ ಇಲ್ಲ. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ ಪಕ್ಷ ಪರಿಣತಿ ಹಾಗೂ ಪ್ರಸಿದ್ಧಿ ಪಡೆದಿದೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಕೇಂದ್ರದಿಂದ ಕಡಿಮೆ ಅನುದಾನ ಬರುತ್ತಿದೆ ಎಂದು ಹೇಳಿದ್ದಾರೆ. ಮೊದಲೆಲ್ಲ 700-800 ಕೋಟಿ ರೂ ಡೆವಲ್ಯೂಷನ್ ಫಂಡ್ (ವಿಕೇಂದ್ರೀಕರಣ ನಿಧಿ) ಬರುತ್ತಿತ್ತು. 2019-20ರಲ್ಲಿ 7578 ಕೋಟಿ ರೂ. ಹಾಗೂ 2021-22ರಲ್ಲಿ 7862 ಕೋಟಿ ರೂ. ಬಂದಿದೆ. ಪ್ರತಿ ವರ್ಷ ಡೆವಲ್ಯೂಷನ್ ಫಂಡ್ನಲ್ಲಿ ಜಾಸ್ತಿ ಹಣ ಬರುತ್ತಿದೆ ಎಂದು ಹೇಳಿದರು.