

ಬಳ್ಳಾರಿ ;ಮತದಾನ ಆದ್ಯ ನಾಗರಿಕರ ಕರ್ತವ್ಯವಾಗಿದ್ದು, ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಹೇಳಿದರು.
ಇಲ್ಲಿನ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಇವರ ಆಶ್ರಯದಲ್ಲಿ ಸೋಮವಾರ ನಡೆದ ಮತದಾನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ಮೇ 07 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರು ಮತ ಚಲಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಯಾವುದೇ ಆಸೆ-ಅಮೀಷಗಳಿಗೆ ಒಳಗಾಗದೇ ಪ್ರತಿಯೊಬ್ಬರು ಮತ ಚಲಾಯಿಸಬೇಕು ಎಂದರು.