

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಜಾಗೃತಿ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮತ್ತು ಸಹಿ ಸಂಗ್ರಹ ಅಭಿಯಾನ ನಡೆ ಯಿತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ,ಜಿಪಂ ಸಿಇಒ ಎಸ್.ಜೆ ಸೋಮಶೇಖರ್ ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ಮಾತನಾಡಿ, ಏ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ಜನರಿಗೆ ಮನವಿ ಮಾಡಿದರು. ಈ ವೇಳೆ ನಾಗರಿಕರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ,ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್‌ಹೆಬ್ಬಳ್ಳಿ,ಮಹಿಳಾ ಮತ್ತು ಮಕ್ಕಳ ಕ ಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್,ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಒ.ಪರಮೇಶ್ವರಪ್ಪ, ಡಿಎಚ್‌ಒ ಡಾ. ಜಿ.ಪಿ.ರೇಣುಪ್ರಸಾದ್,ಟಿಎಚ್‌ಒ ಡಾ.ಬಿ.ವಿ.ಗಿರೀಶ್,ಡಾ.ನಗರಸಭೆ ಆಯುಕ್ತೆ ಎಂ.ರೇಣುಕಾ,ಪರಿಸರ ಇಂಜಿನಿಯರ್ ಜಾಫರ್ ಸೇರಿದ ಂತೆ ಮತ್ತಿತರರು ಇದ್ದರು.