ತಪ್ಪಿತಸ್ಥರ ಬಂಧನಕ್ಕೆ ಎಸ್‌ಡಿಪಿಐ ಪಟ್ಟು

CTD 4 STRIKE-SDPI--01
Published on


ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ಕಾರ‌್ಯಕರ್ತರು ಶುಕ್ರವಾರ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕಲುಷಿತ ನೀರು ಪೂರೈಕೆ ಕುರಿತಂತೆ ಸಮಗ್ರ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ದುರ್ಘಟನೆಯಲ್ಲಿ ಮೃತಪಟ್ಟಿರುವ ನೊಂದ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ನೀಡಬೇಕೆಂದು ಆಗ್ರಹಿಸಿದರು.
ಅಸ್ವಸ್ಥರಿಗೆ ಉಚಿತ ಚಿಕಿತ್ಸೆ ನೀಡಬೇಕು. ಜಿಲ್ಲೆಯ ಎಲ್ಲ ವಾಟರ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕು. ಎರಡೂ ಕಿಡ್ನಿಗಳ ವೈಫಲ್ಯದಿಂದ ಬಾಲಕನೊಬ್ಬ ಬಳಲುತ್ತಿದ್ದು, ಕಿಡ್ನಿಗಳ ಮರುಜೋಡಣೆಗೆ ವೈದ್ಯರು ಮುಂದಾಗಬೇಕೆಂದು ಆಗ್ರಹಿಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್, ಉಪಾಧ್ಯಕ್ಷ ಸೈಯದ್ ಸಾದತ್, ಜಾಕೀರ್ ಹುಸೇನ್, ಓಬಣ್ಣ, ನಯಾಜ್, ಕಮ್ರಾನ್ ಆಲಿ, ಆಸೀಫ್ ಆಲಿ, ಮೊಹಸಿನ್ ಆಲಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net