ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಬೆಲ್ಲದ ಮನವಿ

23 Dwd 6
Published on

ಧಾರವಾಡ: ಹುಬ್ಬಳ್ಳಿ- ಧಾರವಾಡ ನಡುವಿನ ಬಿಆರ್​ಟಿಎಸ್ ಮಾರ್ಗದಲ್ಲಿನ ಮೇಲ್ಸೇತುವೆಯ ಪ್ಯಾನೆಲ್​ಗಳು ಕಳಚಿದ ಕುರಿತು ಶಾಸಕ ಅರವಿಂದ ಬೆಲ್ಲದ ಅವರು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬುಧವಾರ ಮಾಹಿತಿ ನೀಡಿದರು.

ಸಮೀಪದ ನವಲೂರ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ತಡೆಗೋಡೆಯ ಕಾಂಕ್ರೀಟ್ ಪ್ಯಾನೆಲ್​ಗಳು ಕಳಚಿ ಬಿದ್ದಿರುವ ಕುರಿತ ಸಮಗ್ರ ಮಾಹಿತಿಯನ್ನು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದಗೆ ನೀಡಿದರು. ಶಾಸಕರ ಪತ್ರಕ್ಕೆ ಸ್ಪಂದಿಸಿದ ಪ್ರಧಾನ ಕಾರ್ಯದರ್ಶಿ, ತ್ವರಿತಗತಿಯಲ್ಲಿ ಪರಿಶೀಲನೆ ನಡೆಸಲಾಗುವುದು. ಕಾಮಗಾರಿ ನಿರ್ವಹಣೆಯಲ್ಲಿ ಲೋಪ ಎಸಗಿದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net