

ಮೈಸೂರು: ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡುವುದರ ಜತೆಗೆ ದೇಶಕ್ಕೆ ಉತ್ತಮ ಪ್ರಜೆಗಳಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಆರ್.ಮಹೇಶ್ ಸಲಹೆ ನೀಡಿದರು.
ಕುವೆಂಪುನಗರದಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ಹಾಗೂ ಕಾಲೇಜಿನ ದಿನಗಳು ಎಂದಿಗೂ ಜೀವನದ ಚಿನ್ನದ ದಿನಗಳು. ವಿದ್ಯಾರ್ಥಿನಿಲಯದಲ್ಲಿ ಎಲ್ಲ ತರಹದ ವಿದ್ಯಾರ್ಥಿಗಳೂ ಇರುತ್ತಾರೆ. ಆದರೆ, ನೀವು ಮಾಡಿದ ತಪ್ಪನ್ನು ತಿದ್ದುವ ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡಿಕೊಳ್ಳಿರಿ. ನಿಮ್ಮದೇ ಆದ ಜೀವನ ದಾರಿಯನ್ನು ನೀವೆ ಆಯ್ಕೆ ಮಾಡಿಕೊಳ್ಳಬೇಕು ಎಂದರು.
ನಿಲಯಪಾಲಕರಾದ ಜಗದೀಶ್ ಕೋರಿ, ಪರಶುರಾಂ, ಚಿಕ್ಕವಡ್ಗಲ್ ಮಂಜುಳಾ, ಭಾಗ್ಯಲಕ್ಷ್ಮೀ, ಮಹಾಲಕ್ಷ್ಮೀ, ಅನುಪಮಾ, ರಮ್ಯಾ, ಮೀನಾ, ರೇಖಾ, ಯೋಗೀಶ್, ಅಭಿಷೇಕ್, ರಿಷಿ, ಪ್ರಜ್ವಲ್ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.