ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಪ್ರತಿಭಟನೆ

CTD 23 STRIKE--02
Published on

ಚಿತ್ರದುರ್ಗ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್‌ಶೆಟ್ಟಿ ಬಣದ ಕಾರ್ರ‌್ಯಕ ರ್ತರು ಶನಿವಾರ ನಗರದಲ್ಲಿ ಪ್ರತಿಭಟಿಸಿದರು.
ರಾಜ್ಯದಲ್ಲಿ ಮುಂಗಾರು ಮಳೆ ವಿಫಲವಾಗಿದ್ದು,ಜಲಾಶಯಗಳಲ್ಲಿ ನೀರು ಇಲ್ಲದಂತಾಗಿದೆ. ಕಾವೇರಿ ಪ್ರಾಂತ್ಯದ ಸುತ್ತಮುತ್ತಲಿನ ರೈತ ರು ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಕಬಿನಿ,ಹಾರಂಗಿ,ಹೇಮಾವತಿ ಹಾಗೂ ಕೆಆರ್‌ಎಸ್ ಜಲಾಶಯಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹೇಗೆ ಸಾಧ್ಯ?
ಕೇಂದ್ರ ಸರ್ಕಾರ,ಎರಡು ರಾಜ್ಯಗಳ ಮುಖ್ಯಮಂತ್ರಿಗಳು,ನೀರಾವರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸ ಬೇಕೆಂದು ಆಗ್ರಹಿಸಿದರು. ತಮಿಳುನಾಡಿಗೆ ನೀರು ಹರಿಸಿದರೆ ಕರ್ನಾಟಕದಲ್ಲಿ ಕುಡಿವ ನೀರಿಗೂ ತೊಂದರೆ ಆಗುತ್ತದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ಕಾರ‌್ಯಕರ್ತರು,ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದೆಂದರು.
ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ.ಮಹಂತೇಶ್,ಉಪಾಧ್ಯಕ್ಷ ತಿಪ್ಪೇಸ್ವಾಮಿ,ಕಾರ‌್ಯದರ್ಶಿ ರವಿಕುಮಾರ್,ಸುರೇಶ್ ಟೈಲರ್,ರವಿ,ರವಿಕುಮಾ ರ್,ಬಾಬು,ಸೈಯದ್‌ಅಲಿ,ಸುರೇಶ್,ಎಲ್‌ಐಸಿ ಕೃಷ್ಣಮೂರ್ತಿ,ವೆಂಕಟೇಶ್,ಗಾಯತ್ರಿ,ಶಿವರುದ್ರಮ್ಮ,ನಾಗಲಕ್ಷ್ಮೀ ಮತ್ತಿತರರು ಪ್ರತಿಭ ಟನೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net