ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಜಿಲ್ಲಾ ಕನ್ನಡ ಚಳವಳಿಗಾರರಿಂದ ಖಾಲಿ ಕೊಡ ಹೊತ್ತು ವಿನೂತನ ಪ್ರತಿಭಟನೆ

23
Published on

ಮೈಸೂರು: ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಬೇಕು, ಮೇಕೆದಾಟು ಯೋಜನೆ ಶೀಘ್ರ ಜಾರಿಗೊಳಿಸಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ತಲೆ ಮೇಲೆ ಖಾಲಿ ಕೊಡಗಳನ್ನು ಹೊತ್ತು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿಯೇ ಈಗ ಬರ ಪರಿಸ್ಥಿತಿ ಇದ್ದು, ಇಲ್ಲಿನ ರೈತರು ಬೆಳೆದಿರುವ ಬೆಳೆಗೆ ನೀರಿಲ್ಲ. ಅಲ್ಲದೆ ಬೆಂಗಳೂರು, ಮೈಸೂರು ಸೇರಿದಂತೆ ಪ್ರಮುಖ ಪಟ್ಟಣಗಳಿಗೆ ಕಾವೇರಿ, ಕಪಿಲಾ ನದಿಯಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿನ ಮಾತ್ರ ಈಗಿನ ಪರಿಸ್ಥಿತಿಯಲ್ಲಿ ನೀರು ಬಳಸಬಹುದು. ಆದ್ದರಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ತಮಿಳುನಾಡಿಗೆ ಹರಿದು ಸಮುದ್ರ ಸೇರುವ ನೀರನ್ನು ತಡೆಯಲು ಮೇಕೆದಾಟು ಯೋಜನೆ ಜಾರಿಗೊಳಿಸಬೇಕು. ಆದ್ದರಿಂದ ಕೇಂದ್ರ ಸರ್ಕಾರ ಶೀಘ್ರವೇ ಯೋಜನೆಗೆ ಅನುಮತಿ ನೀಡಬೇಕು. ಕಬಿನಿ ಬಲದಂಡೆ ನಾಲೆಗೆ ನೀರು ಬಿಡಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಮುಖಂಡರಾದ ಹರದನಹಳ್ಳಿ ಬಸವರಾಜು, ದೂರ ಸುರೇಶ್, ವೀರನಹಳ್ಳಿ ಕುಮಾರ್, ನಂಜನಗೂಡು ಜಗದೀಶ್, ಶೈಲಜಾ, ಮೈತ್ರಿ, ಸೌಮ್ಯ, ನಿಂಗಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net