ತರಗತಿಗೆ ಹಾಜರಾಗಲು ಸೂಚಿಸಿ

Nsui
Published on

ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಥಿತಿ ಉಪನ್ಯಾಸಕರು ನಾಲ್ಕೈದು ದಿನಗಳಿಂದ ಚಿತ್ರದುರ್ಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಕಾಡುತ್ತಿದೆ. ಇದರಿಂದಾಗಿ ತರಗತಿಗಳು ನಡೆಯದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಕೂಡಲೇ ತರಗತಿಗೆ ಹಾಜರಾಗಿ ಬೋಧನೆಯಲ್ಲಿ ತೊಡಗಲು ಜಿಲ್ಲಾಧಿಕಾರಿ ಅವರು ಸೂಚಿಸಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು, ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೋಮವಾರ ಪ್ರತಿಭಟನೆ ನಡೆಸಿದರು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿನಯ್ ಗೋಡೆಮನೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net