ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ತರಬೇತಿ ಭತ್ಯೆ ಮಂಜೂರಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನಿಬಂಧನೆಗೊಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿಪರ್ಪಸ್ ಹಾಲ್ ನಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಆ.28ರ ಸಂಜೆ 5 ಗಂಟೆಯೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net