ತರಬೇತಿಗೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗೆ ಉಚಿತವಾಗಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ೆ.19ರಿಂದ ತರಬೇತಿ ನಡೆಯಲಿದ್ದು, 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ನಕಲು ಪ್ರತಿ ಮತ್ತು 4 ಭಾವಚಿತ್ರಗಳನ್ನು ಸಲ್ಲಿಸಬೇಕು. ಮಾದಾಪುರದ ಸಂತೆಮರಳ್ಳಿ ರಸ್ತೆಯ ಪೆಟ್ರೋಲ್‌ಬಂಕ್ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಕಟ್ಟಡದಲ್ಲಿರುವ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9606098878, 8722483393, 9739067155 ಸಂಪರ್ಕಿಸುವಂತೆ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net