

ಚಾಮರಾಜನಗರ: ಎಸ್‌ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಊಟ-ವಸತಿಗಳೊಂದಿಗೆ 30 ದಿನಗಳ ಅವಧಿಯ ಎಂಬ್ರಾಯ್ಡರಿ ತರಬೇತಿ, 18 ದಿನಗಳ ಅವಧಿಯ ಹಪ್ಪಳ, ಉಪ್ಪಿನಕಾಯಿ, ಮಸಾಲೆ ಪೌಡರ್ ತಯಾರಿಕೆ ಕುರಿತ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತರಬೇತಿಯನ್ನು ಇದೇ ತಿಂಗಳ 19ರಂದು ಪ್ರಾರಂಭಿಸುತ್ತಿದ್ದು, ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ನಕಲು ಪ್ರತಿ ಮತ್ತು 4 ಭಾವಚಿತ್ರಗಳನ್ನು ಸಲ್ಲಿಸಬೇಕು. ತರಬೇತಿಯನ್ನು ಮಾದಾಪುರದ ಸಂತೆಮರಳ್ಳಿ ರಸ್ತೆಯ ಪೆಟ್ರೋಲ್ ಬಂಕ್ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡದ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9606098878, 8722483393, 9739067155 ಸಂಪರ್ಕಿಸುವಂತೆ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.