ತರಬೇತಿಗೆ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗೆ ಊಟ-ವಸತಿಗಳೊಂದಿಗೆ ಉಚಿತ ಸಿಸಿ ಟಿವಿ ಅಳವಡಿಕೆ ಮತ್ತು ರಿಪೇರಿ ಹಾಗೂ ಪುರುಷ ಗಾರ್ಮೆಂಟ್ ಉತ್ಪಾದನೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆ.4 ರಿಂದ ತರಬೇತಿ ಪ್ರಾರಂಭಿಸುತ್ತಿದ್ದು, 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ನಕಲು ಪ್ರತಿ ಮತ್ತು 4 ಭಾವಚಿತ್ರಗಳನ್ನು ಸಲ್ಲಿಸಬೇಕು. ತರಬೇತಿಯನ್ನು ಸಂತೇಮರಳ್ಳಿ ರಸ್ತೆಯಲ್ಲಿರುವ ಮಾದಾಪುರ ಪೆಟ್ರೋಲ್ ಬಂಕ್ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡದಲ್ಲಿರುವ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನೀಡಲಾಗುತ್ತದೆ ಎಂದು ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net