ತರಳಬಾಳು ಶ್ರೀ ಸೇರಿ ಮೂವರು ಗಣ್ಯರ ಹೆಸರು

CTD k.m. shivaswamy
Published on

ಚಿತ್ರದುರ್ಗ: ಮಂಡ್ಯದಲ್ಲಿ ಡಿ. 20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗಾಗಿ ಚಿತ್ರದುರ್ಗ ಜಿಲ್ಲೆಯಿಂದ ಮೂವರು ಗಣ್ಯರು ಹೆಸರು ಪ್ರಸ್ತಾಪಿಸಲು ಜಿಲ್ಲಾ ಕಸಾಪ ನಿರ್ಧರಿಸಿದೆ.

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ‌್ಯ ಸ್ವಾಮೀಜಿ, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಹಾಗೂ ಖ್ಯಾತ ಕಾದಂಬರಿಕಾರ ಬಿ.ಎಲ್. ವೇಣು ಅವರ ಹೆಸರನ್ನು ಪರಿಷತ್ ರಾಜ್ಯಕಾರಿಣಿಯಲ್ಲಿ ಪ್ರಸ್ತಾಪಿಸಲಾಗುವುದು. ಈ ಮೂವರು ಸೇರಿದಂತೆ ಜಿಲ್ಲೆಯಲ್ಲಿ ಅರ್ಹರು ಇನ್ನೂ ಇದ್ದಾರೆ. ಮುಂದೆ ಅವರಿಗೂ ಆದ್ಯತೆ ನೀಡಲಾಗುವುದು ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net