

ತರೀಕೆರೆ: ಪುರಸಭೆ ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಪಾರ್ವತಮ್ಮ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ವಿಶ್ವಜೀತ ಮೆಹತಾ ಕಾರ್ಯನಿರ್ವಹಿಸಿದರು. ಶಾಸಕ ಜಿ.ಎಚ್.ಶ್ರೀನಿವಾಸ್ ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಪಟ್ಟಣದ ಅಭಿವೃದ್ಧಿಗೆ ಸಿಎಂ ವಿಶೇಷ ಅನುದಾನದಡಿ 7 ಕೋಟಿ ರೂ. ಒದಗಿಸಲಾಗಿದೆ. ಅನೇಕ ವರ್ಷಗಳಿಂದ ಹದಗೆಟ್ಟಿದ್ದ ಪಟ್ಟಣದ ಪ್ರಮುಖ ರಸ್ತೆ ಅಭಿವೃದ್ಧಿಗೆ 51 ಕೋಟಿ ರೂ.ಗೂ ಹೆಚ್ಚು ಮೊತ್ತ ಬಿಡುಗಡೆ ಮಾಡಿಸಿ ಕಾಮಗಾರಿ ಆರಂಭಿಸಿದ್ದು, ರಸ್ತೆ ನಿರ್ಮಾಣ ಭರದಿಂದ ಸಾಗಿದೆ. ಯುಜಿಡಿ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಪುರಸಭೆ ಪ್ರಗತಿಗೆ ಮತ್ತಷ್ಟು ಅನುದಾನ ಕೊಡಿಸಿಕೊಡಲಾಗುವುದು ಎಂದರು.
ಉಪಾಧ್ಯಕ್ಷೆ ಪಾರ್ವತಮ್ಮ ಸನ್ಮಾನ ಸ್ವೀಕರಿಸಿ ಮಾತನಾಡಿ, ಪಕ್ಷ ಮತ್ತು ಪುರಸಭೆ ಸದಸ್ಯರು ವಿಶ್ವಾಸವಿಟ್ಟು ನೀಡಿದ ಸ್ಥಾನಕ್ಕೆ ಗೌರವ ಬರುವಂತೆ ಕಾರ್ಯನಿರ್ವಹಿಸಲಾಗುವುದು. ಲಭ್ಯವಿರುವ ಅನುದಾನದಲ್ಲಿ ಪಟ್ಟಣ ಮತ್ತು 23ನೇ ವಾರ್ಡ್ ಪ್ರಗತಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಾರೂಕ್, ಪುರಸಭೆ ಮಾಜಿ ಅಧ್ಯಕ್ಷರಾದ ಟಿ.ಎಸ್.ಪ್ರಕಾಶ್ ವರ್ಮ, ಟಿ.ಎಸ್.ರಮೇಶ್, ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಟಿ.ಟಿ.ರಾಘವೇಂದ್ರ, ಕಾರ್ಯದರ್ಶಿ ಕೃಷ್ಣಮೂರ್ತಿ ಇತರರಿದ್ದರು.