

ಮೈಸೂರು: ತಲೆ ಮರೆಸಿಕೊಂಡಿರುವ ಕೈದಿಯ ಕುರಿತು ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ.
ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದ ಸೋಮ ಅಲಿಯಾಸ್ ಕೋತಿ ಸೋಮ ತಲೆ ಮರೆಸಿಕೊಂಡಿರುವ ಕೈದಿಯಾಗಿದ್ದು, ಪ್ರಕರಣವೊಂದರ ಸಂಬಂಧ ಮಂಡ್ಯದ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಸೋಮ, ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.
ಕಳೆದ 2009ರ ನವೆಂಬರ್‌ನಲ್ಲಿ 30 ದಿನ ಪೆರೋಲ್ ರಜೆ ಮೇಲೆ ತೆರಳಿದ್ದು, ವಾಪಾಸ್ ಶರಣಾಗಬೇಕಿತ್ತು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ. ಈ ಕುರಿತು ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಈತನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕೈದಿಯ ಬಗ್ಗೆ ಸುಳಿವು ಸಿಕ್ಕಲ್ಲಿ 0821-2418339 ಸಂಪರ್ಕಿಸಬಹುದು.