ತಳಮಟ್ಟದಿಂದ ಕಾಂಗ್ರೆಸ್ ಸಂಘಟನೆ ಮಾಡಿ

20 KRN-2
ಕೆ.ಆರ್.ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಪದಾಧಿಕಾರಿಗಳಿಗೆ ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್ ಆದೇಶ ಪ್ರತಿ ವಿತರಿಸಿದರು. ಮಲ್ಲೇಶ್‌ಕೋಟೆ, ಹೆಡತಲೆ ಮಂಜುನಾಥ್, ಹಾಡ್ಯ ಮಹದೇವಸ್ವಾಮಿ, ನಟರಾಜ್, ನರಸಿಂಹರಾಜು, ವಾಸಿಂಪಾಷ, ಎಂ.ಎಸ್.ಮಹದೇವ್, ಉದಯಶಂಕರ್, ಸೈಯದ್‌ಜಾಬೀರ್, ಆನಂದ್ ಇದ್ದರು.
Published on

ಕೆ.ಆರ್.ನಗರ: ಪಂಚಾಯತ್‌ರಾಜ್ ಸಂಘಟನೆ ಪದಾಧಿಕಾರಿಗಳು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ದುಡಿಯಬೇಕು ಎಂದು ಸಂಘಟನೆ ಜಿಲ್ಲಾಧ್ಯಕ್ಷ ಮಲ್ಲೇಶ್ ಕೋಟೆ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸದಸ್ಯರು ಪಂಚಾಯಿತಿವಾರು ಪಕ್ಷ ಸಂಘಟಿಸಿ ಜೆಡಿಎಸ್ ಶಾಸಕರ ದುರಾಡಳಿತವನ್ನು ಜನತೆಗೆ ತಿಳಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರಣಕರ್ತರಾಗಬೇಕು ಎಂದರು.

ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್ ಮಾತನಾಡಿದರು. ಸಂಘಟನೆ ಉಪಾಧ್ಯಕ್ಷ ಹೆಡತಲೆ ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಮಾಜಿ ಸದಸ್ಯ ನಟರಾಜ್, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಸಂಘಟನೆ ತಾಲೂಕು ಅಧ್ಯಕ್ಷ ವಾಸಿಂಪಾಷ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್‌ಜಾಬೀರ್, ಯುವ ಕಾಂಗ್ರೆಸ್ ಅಧ್ಯಕ್ಷ ಆನಂದ್, ಮುಖಂಡರಾದ ಹೆಬ್ಬಾಳು ನಾಗೇಂದ್ರ, ರಾಜೇಗೌಡ, ಮುಸ್ತಫ್, ಗೋವಿಂದೇಗೌಡ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net