ತಳಮಟ್ಟದಿಂದ ಪಕ್ಷ ಸಂಘಟಿಸಲು ಸನ್ನದ್ಧರಾಗಿ

25Raibag2-Web
ರಾಯಬಾಗ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಶಾಸಕ ಡಿ.ಎಂ.ಐಹೊಳೆ ಮಾತನಾಡಿದರು. ರಾಜೇಶ ನೇರ್ಲಿ, ಮಹೇಶ ಭಾತೆ, ಕುಮಾರ ಮಡಿವಾಳ, ಸದಾ ಘೋರ್ಪಡೆ, ಸದಾನಂದ ಹಳಿಂಗಳಿ, ಸದಾಶಿವ ಹುಂಜ್ಯಾಗೋಳ, ರಾಜಶೇಖರ ಖನದಾಳೆ, ರಾಜು ಹರಗಣ್ಣವರ ಇದ್ದರು.
Published on

ರಾಯಬಾಗ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲು ತಳಮಟ್ಟದಿಂದಲೇ ಪಕ್ಷ ಸಂಘಟಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ಪಟ್ಟಣದ ಮಹಾಲಿಂಗೇಶರ‌್ವರ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ರಾಯಬಾಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರಿಗೆ ಸಾಲ, ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ರಸ್ತೆ ಸೇರಿ ಬಡವರಿಗೆ, ಹಿಂದುಳಿದ ವರ್ಗದವರಿಗೆ ಅನೇಕ ಯೋಜನೆ ಜಾರಿಗೆ ತಂದಿದೆ. ಆ ಸಾಧನೆಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸಬೇಕು ಎಂದರು.

ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ ಬಿಜೆಪಿ ಮಾತನಾಡಿ, ಮುಂಬರುವ ಚುನಾವಣೆ ಎದುರಿಸಲು ಈಗಿಂದಲೇ ಸನ್ನದ್ಧರಾಗಬೇಕಿದೆ. ಆ ನಿಟ್ಟಿನಲ್ಲಿ ಪದಾಧಿಕಾರಿಗಳು ಪ್ರತಿ ಗ್ರಾಮದಲ್ಲಿಯೂ ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಬೇಕು ಎಂದರು.

ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ, ಪ್ರಧಾನ ಕಾರ್ಯದರ್ಶಿ ಕುಮಾರ ಮಡಿವಾಳ, ಸದಾ ಘೋರ್ಪಡೆ, ಸದಾನಂದ ಹಳಿಂಗಳಿ, ಸದಾಶಿವ ಹುಂಜ್ಯಾಗೋಳ, ರಾಜಶೇಖರ ಖನದಾಳೆ, ರಾಜು ಹರಗಣ್ಣವರ, ಸಂಗಪ್ಪ ದತ್ತವಾಡೆ, ಗೀತಾ ಭಾತೆ, ರಮೇಶ ಕೋಲಣ್ಣವರ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net