ಪ್ರಜಾಪ್ರಭುತ್ವ ಮೌಲ್ಯ ವಿದ್ಯಾರ್ಥಿಗಳಲ್ಲಿ ಬೆಳೆಸಿ

Untitled design4
ಹೂವಿನಹಡಗಲಿಯಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ಶರಣಮ್ಮ ಮಾತನಾಡಿದರು. ತಾಪಂ ಇಒ ಜಯರಾಮ್ ಚವ್ಹಾಣ್, ಬಿಇಒ ಮಹೇಶ್ ವಿ.ಪೂಜಾರ, ಸಮಾಜದ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ ಇದ್ದರು.
Published on

ಹೂವಿನಹಡಗಲಿ: ಮತದಾನ ಪವಿತ್ರವಾದ ಹಕ್ಕಾಗಿದೆ. ಅದರಿಂದ ಯಾರೂ ವಂಚಿತರಾಗಬಾರದು. ಹಾಗಾಗಿ ಹೊಸ ಮತದಾರರು ನೋಂದಣಿ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಕೆ.ಶರಣಮ್ಮ ಹೇಳಿದರು.

ಮತದಾನ ಪವಿತ್ರವಾದ ಹಕ್ಕು

ಪಟ್ಟಣದ ಜಿಪಿಜಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಬುಧವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಮತದಾರರ ನೋಂದಣಿ, ಹೆಸರು ಹಾಗೂ ಇತರ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಈಗಾಗಲೇ ತಾಲೂಕಿನ ಶಾಲಾ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಕಾರ್ಯ ಶಿಕ್ಷಕರು ಮಾಡಲಿ ಎಂದರು. ತಾಪಂ ಇಒ ಜಯರಾಮ್ ಚೌವ್ಹಾಣ್, ಸಮಾಜದ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ, ಗ್ರಾಮೀಣ ಕುಡಿಯುವ ನೀರು ಇಲಾಖೆ ಎಇಇ ಅಂಬೇಡ್ಕರ್, ಬಿಇಒ ಮಹೇಶ್ ವಿ.ಪೂಜಾರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಉಪ ಪಾಚಾರ್ಯ ಪಿ.ಪ್ರಕಾಶ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net