

ಮದ್ದೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಎದುರು ಗುರುವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ನ್ಯಾಯಾಲಯದಿಂದ ತಾಲೂಕು ಕಚೇರಿಯವರೆಗೆ ಮೆರವಣಿಗೆ ಮೂಲಕ ಆಗಮಿಸಿ ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜೆ.ಸುಮಂತ್ ಮಾತನಾಡಿ, ತಮಿಳುನಾಡಿನ ಮುಖ್ಯಮಂತ್ರಿಯನ್ನು ಓಲೈಸುವ ಸಲುವಾಗಿ ಸರ್ಕಾರ ನೀರು ಹರಿಸುತ್ತಿದೆ ಎಂದು ಕಿಡಿಕಾರಿದ ಅವರು, ಕಾವೇರಿ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟಕ್ಕೆ ವಕೀಲರ ಸಂಘ ಬೆಂಬಲ ಸೂಚಿಸುತ್ತದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎನ್.ಎಂ.ಶಿವಣ್ಣ, ಉಪಾಧ್ಯಕ್ಷ ಪುಟ್ಟರಾಜು, ವಕೀಲರಾದ ಯದುನಂದನ್, ಸಿದ್ದಪ್ಪಾಜಿ, ಸುವರ್ಣಾ, ಮಹೇಶ್ ಇದ್ದರು.