ತಾಯಿ ಮರಣ ಪ್ರಮಾಣ ಶೂನ್ಯವಾಗಿಸಲು ಪ್ರಯತ್ನಿಸಿ

HELTH
Published on


ಯಾದಗಿರಿ: ಹೆರಿಗೆ ಪೂರ್ವ ಮತ್ತು ನಂತರದಲ್ಲಿ ವಿಶೇಷ ಆರೋಗ್ಯ ಕಾಳಜಿ ವಹಿಸಿ ತಾಯಿ ಮರಣ ಪ್ರಮಾಣ ಶೂನ್ಯ ಆಗುವಂತೆ ನಿಗಾವಹಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ಆರೋಗ್ಯ ಇಲಾಖೆ ಅಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಇಲ್ಲಿನ ಜಿಲ್ಲಾಕಾರಿ ಕಚೇರಿಯ ಸಭಾಂಗಣದಲ್ಲಿ ಕರೆದಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಯಂದಿರ ಮರಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಗಭರ್ಿಣಿ ಮರಣ ಹೊಂದುವುದು ಆತಂಕಕಾರಿ ವಿಷಯ. ಪ್ರಸವ ಪೂರ್ವ ಹಾಗೂ ನಂತರದ ತಾಯಿ ಹಾಗೂ ಮಗುವಿನ ಆರೋಗ್ಯ ರಕ್ಷಣೆಗೆ ಹಾಗೂ ಪೌಷ್ಟಿಕತೆ ಕಾಪಾಡಲು ಸಕರ್ಾರ ವಿಶೇಷ ಅನುದಾನ ನೀಡುತ್ತಿದ್ದು ಅದರ ಸದುಪಯೋಗ ಆಗಬೇಕು. ಜಿಲ್ಲೆಯಲ್ಲಿ ಪ್ರಸವ ಸಮಯದಲ್ಲಿ ಮರಣ ಹೊಂದುವ ಒಂದು ಪ್ರಕರಣವೂ ನಡೆಯಬಾರದು. ಆ ನಿಟ್ಟಿನಲ್ಲಿ ಪ್ರಯತ್ನ ಆಗಬೇಕು ಎಂದು ಕಟ್ಟುನಿಟ್ಟಾಗಿ ನಿದರ್ೇಶಿಸಿದರು.

ವೈದ್ಯಾಕಾರಿಗಳು ಆಸ್ಪತ್ರೆಗಳಲ್ಲಿ ತಮಗೆ ನಿಗದಿಪಡಿಸಿದ ಸಮಯದವರೆಗೂ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳು( ಮಹಿಳಾ) ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹಳ್ಳಿ-ಹಳ್ಳಿಗೂ ಆಶಾ ಕಾರ್ಯಕರ್ತೆರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಗರ್ಭಿಣಿಯರ ಕುರಿತು ಪ್ರತಿ ತಿಂಗಳು ತಪಾಸಣೆಯನ್ನು ನಿಯಮಿತವಾಗಿ ಮಾಡಿ, ಪ್ರತಿದಿನ ಮನೆಗೆ ಭೇಟಿನೀಡಿ ಆರೋಗ್ಯದ ಕುರಿತು ತಿಳುವಳಿಕೆ ನೀಡಿ ನಿಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net