ತಾಯಿ ಹಾಲಿನ ಮಹತ್ವ ತಿಳಿಸುವುದು ಸ್ತನ್ಯಪಾನ ಸಪ್ತಾಹ

5 ckm 4
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ೨೦೨೫ ಕಾರ್ಯಕ್ರಮವನ್ನು ಡಿಎಚ್‌ಒ ಡಾ.ಅಶ್ವಥ್ ಬಾಬು ಉದ್ಘಾಟಿಸಿದರು. ಡಾ.ಚಂದ್ರಶೇಖರ್, ಡಾ. ಮಂಜುನಾಥ್, ಡಾ.ಭಾರತಿ, ಡಾ. ಶಶಿಕಲಾ, ಡಾ.ಶಿವರಾಜ್, ಡಾ.ಪುಟ್ಟಪ್ಪ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ತಾಯಿ ಹಾಲು, ಅದರ ಮಹತ್ವ ಹಾಗೂ ಅದರಿಂದ ಮಗುವಿನ ಮೇಲಾಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉz್ದÉÃಶದೊಂದಿಗೆ ಆಗಸ್ಟ್ ಮೊದಲ ವಾರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು ತಿಳಿಸಿದರು.

ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾಸ್ಪತ್ರೆ, ಇನ್ನರ್‌ವೀಲ್ ಕ್ಲಬ್, ರೋಟರಿ ಕ್ಲಬ್ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ೨೦೨೫ನ್ನು ಉದ್ಘಾಟಿಸಿ ಮಾತನಾಡಿದರು.

ಸ್ತನ್ಯಪಾನದಿಂದ ಯಾವ ಯಾವ ರೋಗಗಳನ್ನು ತಡೆಯಬಹುದು ಹಾಗೂ ಅದರ ಅನುಕೂಲತೆಗಳ ಬಗ್ಗೆ ಈ ಸಪ್ತಾಹದ ಮೂಲಕ ತಾಯಂದಿರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಆರೋಗ್ಯ ಇಲಾಖೆಯಿಂದ ಆಯೋಜಿಸುವ ವಿವಿಧ ಆರೋಗ್ಯ ಅರಿವು ಕಾರ್ಯಕ್ರಮಗಳಲ್ಲಿ ಇನ್ನರ್ ವೀಲ್ಹ್ ಕ್ಲಬ್, ರೋಟರಿ ಕ್ಲಬ್, ಲಯನ್ ಸಂಸ್ಥೆ ಸಕ್ರಿಯವಾಗಿ ಪಾಲ್ಗೊಂಡು ಸಲಹೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಮಾತನಾಡಿ, ಮಗು ಜನಿಸಿದ ೬ ತಿಂಗಳು ತಪ್ಪದೇ ಸ್ತನ್ಯಪಾನ ಕಡ್ಡಾಯವಾಗಿ ಮಾಡಿಸಬೇಕು ಎಂಬುದನ್ನು ತಾಯಂದಿರಲ್ಲಿ ಸಪ್ತಾಹದ ಮೂಲಕ ಅರಿವು ಮೂಡಿಸುವ ಅಗತ್ಯವಿದೆ. ಇದನ್ನು ಮನಗಂಡ ವಿಶ್ವ ಆರೋಗ್ಯ ಸಂಸ್ಥೆ ಪ್ರತೀ ವರ್ಷ ಈ ಬಗ್ಗೆ ಅರಿವು ಮೂಡಿಸಲು ಸ್ತನ್ಯಪಾನ ಸಪ್ತಾಹವನ್ನು ಆಚರಿಸುತ್ತಿದೆ. ೨೦೨೫ರಲ್ಲಿ ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ ಎಂಬ ಘೋಷವಾಕ್ಯದೊಂದಿಗೆ ಶೇ. ೫೦ರಷ್ಟು ಗುರಿ ತಲುಪಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸ್ತನ್ಯಪಾನದಿಂದ ತಾಯಿ ಮತ್ತು ಮಗು ಇಬ್ಬರಿಗೂ ಪ್ರಯೋಜನವಿದೆ. ಚುಚ್ಚುಮದ್ದು ಕೊಡುವುದರಿಂದ ಹಲವಾರು ರೋಗಗಳನ್ನು ತಡೆಗಟ್ಟಲು ಅವಕಾಶವಿರುವಂತೆ ಮಗುವಿಗೆ ರೋಗಗಳು ಬರದಂತೆ ತಡೆಯುವ ಶಕ್ತಿ ಸ್ತನ್ಯಪಾನಕ್ಕಿದೆ ಎಂದರು.

ಮಗು ಜನಿಸಿದ ಮೊದಲ ತಿಂಗಳಲ್ಲೇ ಮೃತಪಡುವುದು ಮತ್ತು ರೋಗಗಳಿಗೆ ತುತ್ತಾಗುವುದನ್ನು ತಡೆಯಲು ಸ್ತನ್ಯಪಾನದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತಾಯಂದಿರು ಮಗು ಆರೈಕೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕಾಗಿದೆ ಎಂದು ಕಿವಿಮಾತು ಹೇಳಿದರು.

ಸ್ತನ್ಯಪಾನ ಮಾಡುವುದರಿಂದ ಮಹಿಳೆಯರ ಸೌಂದರ್ಯ ಹಾಳಾಗುತ್ತದೆ ಎಂಬ ಮೂಡನಂಬಿಕೆಯಿAದ ಹೊರತರುವ ಕೆಲಸವನ್ನು ಈ ಸಪ್ತಾಹದ ಮೂಲಕ ಮಾಡಲಾಗುವುದು. ಜೊತೆಗೆ ತಾಯಂದಿರಲ್ಲಿ ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖ ಉz್ದÉÃಶವಾಗಿದೆ ಎಂದು ಹೇಳಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮಂಜುನಾಥ್ ಮಾತನಾಡಿ, ಮಗು ಜನಿಸಿದ ೬ ತಿಂಗಳವರೆಗೆ ಕಡ್ಡಾಯವಾಗಿ ಎದೆಹಾಲನ್ನು ನೀಡಿದರೆ ವಾಂತಿಭೇದಿ, ನ್ಯುಮೋನಿಯಾ ಮುಂತಾದವುಗಳಿಗೆ ತುತ್ತಾಗುವುದನ್ನು ತಡೆಯಬಹುದಾಗಿದೆ. ತಾಯಂದಿರಿಗೆ ಹಾಲುಣಿಸುವ ಬಗ್ಗೆ ಆರೋಗ್ಯ ಇಲಾಖೆಯ ಕಾರ್ಯಕರ್ತರು ಮನವರಿಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ೨೦೨೪-೨೫ ರಲ್ಲಿ ೧೨,೩೦೨ ಮಕ್ಕಳು ಜನಿಸಿದ್ದು, ಇದರಲ್ಲಿ ೮೩ ಮಕ್ಕಳು ಮೊದಲ ಹುಟ್ಟುಹಬ್ಬವನ್ನೇ ನೋಡಿಲ್ಲ. ಕಾರಣ ಸ್ತನ್ಯಪಾನದಿಂದ ವಂಚಿತರಾಗಿ ೧೮ ಮಕ್ಕಳು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಭಾರತಿ, ಡಾ. ಶಶಿಕಲಾ, ಶಿವರಾಜ್, ಸ್ತಿçÃರೋಗ ತಜ್ಞ ಡಾ. ಪುಟ್ಟಪ್ಪ, ಮಕ್ಕಳ ತಜ್ಞರಾದ ಡಾ. ವರದಾ ವಿದ್ಯಾರಾಣಿ, ಡಾ. ಕಲ್ಪನ, ಇನ್ನರ್ ವೀಲ್ ಕ್ಲಬ್‌ನ ನಯನ ಸಂತೋಷ್, ಶಾಲಿನಿ ನಾಗೇಶ್, ನಾಗೇಶ್ ಕೆಂಜಿಗೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net