ತಾಯಿಯಂತೆ ಕನ್ನಡ ಪ್ರೀತಿಸಿ

27M.D.R.1
ಮದ್ದೂರು ತಾಲೂಕು ತೈಲೂರು ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಕಸಾಪ ಮಾಜಿ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಅವರನ್ನು ಅಭಿನಂದಿಸಲಾಯಿತು. ತೈಲೂರು ವೆಂಕಟಕೃಷ್ಣ, ಪ್ರಸನ್ನ, ಶಶಿಕಲಾ, ಬಸವರಾಜಗೌಡ, ತೈಲೂರು ಸಿದ್ದರಾಜು, ಯೋಗೇಶ್ ಇದ್ದರು.
Published on

ಮದ್ದೂರು: ಕನ್ನಡ ಭಾಷೆಯನ್ನು ಪ್ರತಿಯೊಬ್ಬರು ಹೆತ್ತ ತಾಯಿಯಂತೆ ಪ್ರೀತಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಮೀರಾಶಿವಲಿಂಗಯ್ಯ ತಿಳಿಸಿದರು.

ತಾಲೂಕಿನ ತೈಲೂರು ಗ್ರಾಮದಲ್ಲಿ ಇತ್ತೀಚೆಗೆ ಕನ್ನಡ ರಾಜ್ಯೋತ್ಸವ, ಕನ್ನಡ ಜ್ಯೋತಿ ಯುವಕರ ಸಂಘದ 19ನೇ ವರ್ಷದ ವಾರ್ಷಿಕೋತ್ಸವ, ಕನ್ನಡ ಜ್ಯೋತಿ ಸೇವಾ ಟ್ರಸ್ಟ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಕನ್ನಡ ಭಾಷೆ ಅತ್ಯಂತ ಪುರಾತನ ಭಾಷೆಯಾಗಿದ್ದು, ಕನ್ನಡಿಗರಾಗಿ ನಾವು ಹುಟ್ಟಿರುವುದಕ್ಕೆ ಹೆಮ್ಮೆಪಡಬೇಕು. ಕನ್ನಡ ಜ್ಯೋತಿ ಯುವಕರ ಸಂಘ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಮೆಚ್ಚುಗೆಯ ವಿಷಯವಾಗಿದ್ದು, ಈಗ ಕನ್ನಡ ಜ್ಯೋತಿ ಸೇವಾ ಟ್ರಸ್ಟ್ ಆರಂಭಿಸಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸಲಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತೈಲೂರಿನ ಮಾಜಿ ಸೈನಿಕ ಸಿದ್ದಯ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಡಿದ ಗಣ್ಯರನ್ನು ಅಭಿನಂದಿಸಲಾಯಿತು. ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನ, ಗ್ರಾಪಂ ಅಧ್ಯಕ್ಷೆ ಶಶಿಕಲಾ, ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ, ಕನ್ನಡ ಜ್ಯೋತಿ ಯುವಕರ ಸಂಘದ ಅಧ್ಯಕ್ಷ ತೈಲೂರು ಸಿದ್ದರಾಜು, ನಿವೃತ್ತ ಕಾರ್ಯಪಾಲಕ ಅಭಿಯಂತರ ಬಸವರಾಜಗೌಡ, ಸಾಹಿತಿ ಯೋಗೇಶ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸಿ.ರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net