ತಾಲೂಕಾ ಮಟ್ಟದ ಕ್ರೀಡಾಕೂಟ

Sports Logo
Published on

ಚಿಕ್ಕೋಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ, ಚಿಕ್ಕೋಡಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಯರಗಟ್ಟಿ ಇವರ ಆಶ್ರಯದಲ್ಲಿ 2023-24 ನೇ ಸಾಲಿ ಹುಕ್ಕೆರಿ ತಾಲೂಕಾ ಮಟ್ಟದ ಕ್ರೀಡಾಕೂಟವನ್ನು ಗುರುವಾರ ಆ.31ರಿಂದ ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಹುಕ್ಕೇರಿ ಶಾಸಕ ನಿಖಿಲ ಕತ್ತಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಆಯ್. ಭಂಡಾರೆ, ತಹಶೀಲ್ದಾರರಾದ ಮಂಜುಳಾ ನಾಯಕ , ಬಿಇಒ ಪ್ರಭಾವತಿ ಪಾಟೀಲ ಆಗಮಿಸಲಿದ್ದಾರೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net