ತಾಲೂಕಿನ ಸಮಗ್ರ ಅಭಿವೃದ್ಧಿ ನನ್ನ ಗುರಿ

02M.D.R.1
Published on

ಮದ್ದೂರು: ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಮುಖ್ಯ ಗುರಿಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಸೊಳ್ಳೆಪುರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿ, ನಾನು ಶಾಸಕನಾದ ಎರಡೇ ವರ್ಷದಲ್ಲಿ ಸರ್ಕಾರದಿಂದ 1200 ಕೋಟಿ ರೂ.ಗೂ ಅಧಿಕ ಅನುದಾನವನ್ನು ತಂದು ಸರ್ವತೋಮುಖ ಅಭಿವೃದ್ಧಿ ಮಾಡುತ್ತಿದ್ದೇನೆ. ನಾನು ಶಾಸಕನಾದ ಆರಂಭದಲ್ಲಿ ಹಳ್ಳಿಗಳಿಗೆ ತೆರಳಿ ಜನಸಂಪರ್ಕ ಮಾಡಿದಾಗ ಗ್ರಾಮಾಂತರ ಪ್ರದೇಶದಲ್ಲಿರುವ ಸಮಸ್ಯೆಗಳನ್ನು ಜನರು ನನ್ನ ಗಮನಕ್ಕೆ ತಂದಿದ್ದರು. ಅದನ್ನು ಪಟ್ಟಿಮಾಡಿಕೊಂಡು ಇಲಾಖಾವಾರು ಅನುದಾನ ಬಿಡುಗಡೆ ಮಾಡಿಸಿ ರಸ್ತೆ, ಸಿಸಿ ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನ್ನ ಮೇಲೆ ವಿಶ್ವಾಸವಿಟ್ಟು ತಾಲೂಕಿನ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಶೇಷ ಅನುದಾನ ಅನುದಾನ ತಂದು ತಾಲೂಕಿನಲ್ಲಿ ಶಾಶ್ವತ ಕಾಮಗಾರಿಗಳನ್ನು ಮಾಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಎಂಪಿಸಿಎಸ್ ಅಧ್ಯಕ್ಷ ಎಸ್.ಟಿ.ಪ್ರಕಾಶ್, ಗ್ರಾಪಂ ಸದಸ್ಯ ಗಿರೀಶ್, ಮುಖಂಡರಾದ ಪುಟ್ಟರಾಜು, ಎಸ್.ಸಿ.ರಮೇಶ್, ಶಂಕರೇಗೌಡ, ವಿಶ್ವನಾಥ್, ಸೊ.ಶಿ.ಶಿವರಾಮು, ಎಸ್.ಡಿ.ಪ್ರಕಾಶ್, ವೆಂಕಟೇಶ್, ಚೆನ್ನಪ್ಪ, ನಿತಿನ್, ನಾರಾಯಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net