ತಾಲೂಕಿನಲ್ಲಿ ಸಮರ್ಪಕ ಪಡಿತರ ವಿತರಣೆ

Published on

ಬೇಲೂರು : ಆಹಾರ ಗೋದಾಮಿನಿಂದ ವಿತರಿಸುವ ಅಕ್ಕಿ ಚೀಲದಲ್ಲಿ ತೂಕ ಮತ್ತು ಅಳತೆ ಸರಿಯಾಗಿದ್ದು ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಿಸಲಾಗುತ್ತಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿಗಳ ಸಂಘದ ಗೌರವಾಧ್ಯಕ್ಷ ನಾಗರಾಜು ಕುಶಾವರ ಹೇಳಿದರು.

ಪಟ್ಟಣದಲ್ಲಿರುವ ಆಹಾರ ನಿಗಮದ ಗೋದಾಮಿನಲ್ಲಿ ನ್ಯಾಯ ಬೆಲೆ ಅಂಗಡಿಗಳಿಗೆ ವಿತರಣೆಯಾಗುವ ಅನ್ನಭಾಗ್ಯ ಯೋಜನೆಯ ಪಡಿತರ ತೂಕದಲ್ಲಿ ವಂಚನೆ ನಡೆಯುತ್ತಿದ್ದರೂ ಆಹಾರ ಇಲಾಖೆಯ ಶಿರಸ್ತೇದಾರ್ ಗೀತಾಂಜಲಿ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದು, ಇವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ದೇಶಾಣಿ ಆನಂದ ಇತ್ತೀಚೆಗೆ ತಾಪಂ ಸಭೆಯಲ್ಲಿ ಆರೋಪಿಸಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.\

ಗೋದಾಮಿನಿಂದ ಅಕ್ಕಿ ವಿತರಿಸುವಾಗ ಸರಿಯಾದ ಪ್ರಮಾಣದಲ್ಲಿ ನಮ್ಮ ಎದುರಿನಲ್ಲೆ ತೂಕ ಮಾಡಿ ಸಹಿ ಪಡೆಯುತ್ತಾರೆ. ಆದರೆ ತೂಕದಲ್ಲಿ ವ್ಯತ್ಯಾಸವಾದರೆ ನಾವು ಗ್ರಾಹಕರಿಗೆ ಅಕ್ಕಿ ವಿತರಿಸಲು ಹೇಗೆ ಸಾಧ್ಯ ಮತ್ತು ಇತ್ತೀಚೆಗೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ನ್ಯಾಯಬೆಲೆ ಅಂಗಡಿಗಳಿಂದ ಗ್ರಾಹಕರಿಗೆ ಯಾವುದೇ ತೊಂದರೆ ಆಗಬಾರದು, ತೂಕದಲ್ಲಿ ವ್ಯತ್ಯಾಸ ಕಂಡು ಬಂದರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಗೋದಾಮಿನಲ್ಲೂ ತೂಕದಲ್ಲಿ ಲೋಪ ಕಂಡುಬಂದರೆ ಗಮನಕ್ಕೆ ತಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವದಾಗಿ ಎಚ್ಚರಿಕೆ ನೀಡಿರುತ್ತಾರೆ. ಈ ಬಗ್ಗೆ ಸತ್ಯಾಂಶ ತಿಳಿಯದೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಆರೋಪ ಮಾಡಿರುವುದು ಸರಿಯಲ್ಲ ಎಂದರು.

ತಾಲೂಕು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಕಾರ್ಯದರ್ಶಿ ಎನ್.ಅನಂತು, ಉಪಾಧ್ಯಕ್ಷ ತಿಮ್ಮೇಗೌಡ, ಸದಸ್ಯರಾದ ಶಿವಣ್ಣ, ಶಂಬುಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net