ತಾಲೂಕಿನಾದ್ಯಂತ ಹೆಚ್ಚು ಬಸ್‌ಗಳು ಸಂಚರಿಸಲಿ

IMG-20230611-WA0131
Published on

ಚನ್ನರಾಯಪಟ್ಟಣ: ತಾಲೂಕಿನಾದ್ಯಂತ ಸಾರಿಗೆ ಸಂಸ್ಥೆಯ ಬಸ್‌ಗಳು ಸಂಚರಿಸಿದರೆ ಶಕ್ತಿ ಯೋಜನೆಯ ಲಾಭ ತಾಲೂಕಿನ ಎಲ್ಲ ಮಹಿಳೆಯರಿಗೂ ದೊರೆಯುತ್ತದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚನ್ನರಾಯಪಟ್ಟಣ ಬಸ್ ನಿಲ್ದಾಣದಲ್ಲಿ ಭಾನುವಾರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
    ಕರೊನಾಗಿಂತ ಮೊದಲು ಚನ್ನರಾಯಪಟ್ಟಣ ಘಟಕದಿಂದ 122 ಅನುಸೂಚಿ ಮಾರ್ಗಗಳು ಕಾರ್ಯಾಚರಣೆ ಮಾಡುತ್ತಿದ್ದು, ಕರೊನಾ ತರುವಾಯು 95 ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿವೆ. ತಾಲೂಕಿನ ಹಲವಾರು ಹಳ್ಳಿಗಳಿಗೆ ಬಸ್ ಸಂಚಾರವಿಲ್ಲದಂತಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಂದಿನ ಸಾರಿಗೆ ಸಚಿವರಿಗೆ ಮನವಿ ಮಾಡಿದ್ದು, ಮುಂಬರುವ ಅಧಿವೇಶನದಲ್ಲಿ ಈ ವಿಚಾರ ಸಂಬಂಧ ಸಾರಿಗೆ ಸಚಿವರ ಗಮನಕ್ಕೆ ತರಲಾಗುವುದು. ಮುಂದಿನ ದಿನಗಳಲ್ಲಿ 20 ಹೊಸ ಬಸ್‌ಗಳನ್ನು ನೀಡಿದ್ದಲ್ಲಿ ತಾಲೂಕಿನಾದ್ಯಂತ ಎಲ್ಲ ಹಳ್ಳಿಗಳಿಗೂ ಬಸ್ ಸಂಚಾರದ ವ್ಯವಸ್ಥೆಯಾಗಿ ಶಕ್ತಿ ಯೋಜನೆಯ ಲಾಭ ಎಲ್ಲ ಮಹಿಳೆಯರಿಗೂ ದೊರೆಯುತ್ತದೆ ಎಂದು ತಿಳಿಸಿದರು.

  • ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಬಿ.ಎಂ. ಗೋವಿಂದರಾಜು, ಡಿವೈಎಸ್ಪಿ ಪಿ.ರವಿಪ್ರಸಾದ್, ಸರ್ಕಲ್ ಇನ್ಸ್‌ಪೆಕ್ಟರ್ ವಸಂತ್‌ಕುಮಾರ್ ಸಾರಿಗೆ ಸಂಸ್ಥೆಯ ಸಹಾಯಕ ಆಡಳಿತ ಅಧಿಕಾರಿ ಚೆಲುವರಾಜು, ಘಟಕ ವ್ಯವಸ್ಥಾಪಕಿ ಶಾಜೀಯಾ ಬಾನು, ಸಂಚಾರ ನಿರೀಕ್ಷಕ ಕೃಪಾಕರ್, ಮುಖಂಡರಾದ ರಮೇಶ್ ಕುಂಬಾರಹಳ್ಳಿ, ಕೃಷ್ಣೇಗೌಡ, ರಂಗಸ್ವಾಮಿ, ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net