ತಾಲೂಕು ಅಭಿವೃದ್ಧಿಪಥದಲ್ಲಿ ನಡೆಯುತ್ತಿದೆ

IMG-20201120-WA0112
Published on

ಗೌರಿಬಿದನೂರು : ಶಾಸಕನಾಗಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿಯಿಂದ ಜನರ ಪ್ರೋತ್ಸಾಹ ದೊರೆಯುತ್ತಿದೆ ಎಂದು ಶಾಸಕ ಶಿವಶಂಕರೆಡ್ಡಿ ಹೇಳಿದರು.

ತಾಲೂಕಿನ ಮುದುಗಾನಕುಂಟೆ ಗಂಗಾ ಭಾಗೀರಥಿ ದೇವಾಲಯದಲ್ಲಿ ಮುಜರಾಯಿ ಇಲಾಖೆಯ 1.5 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಸತತ 5 ಬಾರಿ ಶಾಸಕನಾಗಿ ಆಯ್ಕೆಯಾಗಲು ನಾನು ಮಾಡಿದ ಕೆಲಸಗಳೇ ಕಾರಣ. ಜನರು ನನ್ನ ಕೆಲಸಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಹೀಗಾಗಿ ತಾಲೂಕು ಅಭಿವೃದ್ಧಿಪಥದಲ್ಲಿ ನಡೆಯುತ್ತಿದೆ ಎಂದರು.

ತಾಪಂ ಅಧ್ಯಕ್ಷ ಆರ್.ಲೋಕೇಶ್ ಮಾತನಾಡಿ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಶಾಸಕರು ಅಗತ್ಯ ನೆರವು ಒದಗಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಪಂಚಾಯತ್ ರಾಜ್ ಎಇಇ ಎಂ. ಜಗದೀಶ್ ಮಾತನಾಡಿ, ದೇವಾಲಯದ ಆವರಣದಲ್ಲಿ ವಿಶ್ರಾಂತಿ ಕೊಠಡಿ, ಸಮುದಾಯ ಭವನ, ಚರಂಡಿ ವ್ಯವಸ್ಥೆ, ಅಡುಗೆ ಕೋಣೆ, ಶೌಚಗೃಹ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ದೇವಾಲಯಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಡಿ.ಎಂ. ಶಿವಕುಮಾರ್, ತಾಪಂ ಮಾಜಿ ಉಪಾಧ್ಯಕ್ಷ ಎಚ್. ಎನ್. ಪ್ರಕಾಶ್ ರೆಡ್ಡಿ ಹಾಗೂ ದೇವಾಲಯದ ಆತಳಿತ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.

3 ಂಣಣಚಿಛಿಟಿಣ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net