ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

11111111
Published on

ನಾಯಕನಹಟ್ಟಿ: ಈಚೆಗೆ ನಾಯಕನಹಟ್ಟಿಯಲ್ಲಿ ಜರುಗಿದ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಪಟ್ಟಣದ ಜೆಜೆಆರ್ ಪ್ರೌಢಶಾಲೆಯ ಮಕ್ಕಳು ವಿವಿಧ ಸ್ಪರ್ಧೆಯಲ್ಲಿ ವಿಜೇತರಾಗಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಾಲಿಬಾಲ್ ದ್ವಿತೀಯ, ಬಾಲಕಿಯರ ಕಬಡ್ಡಿ ದ್ವಿತೀಯ, ಬಾಲಕರ ಷಟಲ್ ಬ್ಯಾಡ್ಮಿಟನ್ ದ್ವಿತೀಯ, ಬಾಲಕಿಯರ ಬಾಲ್ ಬ್ಯಾಡ್ಮಿಟನ್ ದ್ವಿತೀಯ, ಅಥ್ಲೆಟಿಕ್ ವಿಭಾಗದಲ್ಲಿ ಗುಂಡು ಎಸೆತ ಪ್ರಥಮ,ತ್ರಿವಿಧ ಜಿಗಿತ ಪ್ರಥಮ, ಎತ್ತರ ಜಿಗಿತ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳು, ತರಬೇತಿ ನೀಡಿದ ದೈಹಿಕ ಶಿಕ್ಷಕ ಇಸ್ಬಾಲ್ ಅಹಮದ್ ಮತ್ತು ಸಿಬ್ಬಂದಿಯನ್ನು ಮಂಗಳವಾರ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮೈಲಾರಸ್ವಾಮಿ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net