ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

02 yelandur 01
ಯಳಂದೂರು ಸಮೀಪದ ಸಂತೆಮರಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಯಳಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಹೈಜಂಪ್‌ನಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿ.
Published on

ಯಳಂದೂರು: ದೈಹಿಕ ಸಾಮರ್ಥ್ಯ ಹೆಚ್ಚಿಸುವುದರೊಂದಿಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೂ ಕ್ರೀಡೆ ಸಹಕಾರಿಯಾಗಿದೆ, ಪ್ರತಿಯೊಬ್ಬರೂ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕಾಂತರಾಜು ತಿಳಿಸಿದರು.


ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಸಂತೆಮರಹಳ್ಳಿಯ ಜೆಎಸ್‌ಎಸ್ ಪ್ರೌಢಶಾಲೆ ಮೈದಾನದಲ್ಲಿ ಶುಕ್ರವಾರ ಆಯೊಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ಕಳೆದ ಎರಡು ವರ್ಷಗಳಿಂದ ಕ್ರೀಡಾಚಟುವಟಿಗಳು ಇಲ್ಲದೆ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದರು. ಈ ಬಾರಿ ಯಾವುದೇ ಸಮಸ್ಯೆಗಳಿಲ್ಲ. ಹಾಗಾಗಿ ಎಲ್ಲರೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾಗಲು ಉತ್ಸುಕರಾಗಿದ್ದಾರೆ. ಹಾಗಾಗಿ, ದಸರಾ ಕ್ರೀಡಾಕೂಟ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಭಾಗವಹಿಸುವ ಪ್ರತಿಯೊಬ್ಬರೂ ಕ್ರೀಡಾ ಸ್ಫೂರ್ತಿಯೊಂದಿಗೆ ಆಟವಾಡಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕಿ ಆರ್.ಅನಿತಾ, ಮಧುತೇಜಿನ್, ರಂಗಸ್ವಾಮಿ, ದೊರೆಸ್ವಾಮಿ, ಗೋಪಾಲ್, ದೈಹಿಕ ಶಿಕ್ಷಣ ಶಿಕ್ಷಕರಾದ ಮುರಳಿಧರ್, ಕೆಸ್ತೂರು ಮಲ್ಲಿಕಾರ್ಜುನ್ ಸೇರಿದಂತೆ ಅನೇಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net