ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ.

ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ.
Published on

ಅರಸೀಕೆರೆ : ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಹಗೂ ಪಠ್ಯೇತರ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿವೆ ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಟೀಕೆರೆ ಪ್ರಸನ್ನಕುಮಾರ್ ಹೇಳಿದರು.

ಜೇನುಕಲ್ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಓದುಗಾರಿಕೆಯಿಂದ ಜ್ಞಾನ ವೃದ್ಧಿಯಾದರೆ, ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಕ್ಷಮತೆ ವೃದ್ಧಿಸಿಕೊಳ್ಳಲು ಸಾಧ್ಯವಾಗಲಿದೆ.ವ್ಯಾಸಂಗದ ಅವಧಿಯಲ್ಲಿ ಪಠ್ಯವಸ್ತು ಕಲಿಕೆ ಹಾಗೂ ಕ್ರೀಡೆ ಒಂದು ನಾಣ್ಯದ ಎರಡು ಮುಖಗಳಂತಿದ್ದು ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗಲಿವೆ.ಸೋಲು, ಗೆಲುವನ್ನು ಸಮಾನಾಗಿ ಸ್ವೀಕರಿಸುವಮೂಲಕ ಕ್ರೀಡಾ ಸ್ಪೂರ್ತಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ಬಿಇಒ ಮೋಹನ್ ಕುಮಾರ್ ಮಾತನಾಡಿ,ಕರೊನಾ ಸಂಕಷ್ಟದ ಬಳಿಕ ದೊಡ್ಡಮಟ್ಟದ ಅಟೋಟ ಸ್ಪರ್ಧೆಗಳು ಕ್ರೀಡಾಂಗಣದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ.72 ಪ್ರೌಢಶಾಲೆಗಳ 1178 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗೆ ಸೆಣಸಲಿದ್ದಾರೆ ಎಂದರು.ದೈಹಿಕ ಪರಿವೀಕ್ಷಕ ಶಿವಶಂಕರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಲ್ಯಾಣ್ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗತಿಹಳ್ಳಿ ಸದಾನಂದ್, ಶಿಕ್ಷಕ ತ್ರಿಮೂರ್ತಿ ಸೇರಿ ಹಲವರು ವೇದಿಕೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net