

ಗದಗ: ಇಷ್ಟು ದಿನ ಜಿಲ್ಲೆಯಲ್ಲಿ ಯಾರಿಗಾದರೂ ಕರೊನಾ ಸೋಂಕು ತಗುಲಿದರೆ ಚಿಕಿತ್ಸೆಗಾಗಿ ಗದಗನ ಜಿಮ್್ಸ ಆಸ್ಪತ್ರೆಗೆ ದಾಖಲಿಸಬೇಕಾಗುತ್ತಿತ್ತು. ಆದರೆ, ಇದೀಗ ಮುಂಡರಗಿ ತಾಲೂಕಿನಲ್ಲಿಯೂ ಸೋಂಕಿತರಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ.
ಹಿರೇವಡ್ಡಟ್ಟಿ ಬಳಿಯ ಮುರಾರ್ಜಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಜೂ.27 ರಿಂದ ಕೋವಿಡ್-19 ಚಿಕಿತ್ಸೆ ಘಟಕವನ್ನು ತೆರೆಯಲಾಗಿದೆ. ಅಲ್ಲಿ 30 ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿಹಾಸ ಅವರ ನೇತೃತ್ವದಲ್ಲಿ ಆರು ಜನರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಗದಗ ಜಿಲ್ಲಾಸ್ಪತ್ರೆಯಲ್ಲಿ ಬೆಡ್ಗಳ ಕೊರತೆಯಿಂದಾಗಿ ಜಿಲ್ಲಾಧಿಕಾರಿ ಅವರ ಒಪ್ಪಿಗೆ ಮೇರೆಗೆ ಜೂ.27ರಿಂದ ಹಿರೇವಡ್ಡಟ್ಟಿ ವಸತಿ ಶಾಲೆಯಲ್ಲಿ ಕೋವಿಡ್-19 ಚಿಕಿತ್ಸಾ ಘಟಕ ತೆರೆದು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ಎ- ಗ್ರೇಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. |ಡಾ.ಕೀರ್ತಿಹಾಸ್, ತಾಲೂಕು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮುಂಡರಗಿ