

ಯಾದಗಿರಿ: ಸರಕಾರ ಇಂದು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿ ಎಂಬ ಕಾರಣದಿಂದ ಉಚಿತ ಶಿಕ್ಷಣ ನೀಡುತ್ತಿದೆ. ಉನ್ನತ ಶಿಕ್ಷಣ ಪಡೆದು ಮುಂದೆ ಬರುವಂತೆ ಶಾಸಕ ಶರಣಗೌಡ ಕಂದಕೂರ ಸಲಹೆ ನೀಡಿದರು.
ಗುರಮಠಕಲ್ ಪಟ್ಟಣದ ಸರಕಾರಿ ಪ್ರಥಮ ದರ್ಕಾಜೆಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಚಟುವಟಿಕಗಳ ಉದ್ಘಾಟನೆ, ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮುಗಿದ ನಂತರ ಮುಂದೇನು? ಎಂಬ ಪ್ರಶ್ನೆ ನಮ್ಮ ವಿದ್ಯಾರ್ಥಿಗಳಿಗೆ ಕಾಡುತ್ತಿದೆ. ಶಿಕ್ಷಣ ತಜ್ಞರಿಂದ ಐಎಎಸ್, ಕೆಎಎಸ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕೊಡಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಶಾಲಾ,ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಶಿಸ್ತು ಕಾಪಾಡಬೇಕು. ಕೆಲ ವಿದ್ಯಾಥರ್ಿಗಳು ಅಶಿಸ್ತಿನ ರೀತಿಯಲ್ಲಿ ನಡೆದುಕೊಳ್ಳುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಮುಂದೆ ಹೀಗಾಗಬಾರದು. ತಾಳ್ಮೆ ಮತ್ತು ಸಹನೆಯೇ ವಿದ್ಯಾಥರ್ಿಗಳಿಗೆ ಭೂಷಣ. ಪರೀಕ್ಷೆಗಳಲ್ಲಿ ಫೇಲ್ ಆದಾಗ ದುಡುಕಿನ ನಿರ್ಧಾರ ಕೈಗೊಂಡು ಪ್ರಾಣಕ್ಕೆ ಅಪಾಯ ತಂದೊಡ್ಡಿಕೊಳ್ಳುತ್ತಾರೆ. ಆ ರೀತಿ ಯಾವತ್ತೂ ಮಾಡಬೇಡಿ. ಜೀವನದಲ್ಲಿ ಸೋತಾಗಲೇ ಗೆಲುವಿನ ದಡ ಸೇರಲು ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.