ತಾವರೆಕೆರೆ ಶಾಲೆಯಲ್ಲಿ ಪರೀಕ್ಷಾ ಪೇ ಚರ್ಚಾ ವೀಕ್ಷಣೆ, ಪ್ರಧಾನಿ ಸಂವಾದದಲ್ಲಿ ಗ್ರಾಮಸ್ಥರೂ ಭಾಗಿ

c438c6e3-7880-4a20-a55f-1d9da9f948f6
Published on

ಬೆಂಗಳೂರು ಗ್ರಾಮಾಂತರ: ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸುವ ಪರೀಕ್ಷಾ ಪೇ ಚರ್ಚಾ ವರ್ಚುವಲ್ ಕಾರ್ಯಕ್ರಮ ವೀಕ್ಷಣೆಗೆ ಬುಧವಾರ ಹೊಸಕೋಟೆ ತಾಲೂಕು ತಾವರೆಕರೆ ಸರ್ಕಾರಿ ಶಾಲೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮನೋಜ್ ಪಾಲಕರೊಟ್ಟಿಗೆ ಕಾರ್ಯಕ್ರಮ ವೀಕ್ಷಣೆ ಮಾಡಿದ್ದು ವಿಶೇಷವಾಗಿತ್ತು. ಸಹಪಾಠಿಗಳು ಮನೋಜ್ ಬೆನ್ನು ತಟ್ಟಿ ಸಂಭ್ರಮಿಸಿದರು. ಕಾರ್ಯಕ್ರಮ ವೀಕ್ಷಣೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯವಸ್ಥೆ ಕಲ್ಪಿಸಿತ್ತು. ವಿದ್ಯುತ್ ಕಣ್ಣಾಮುಚ್ಚಾಲೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯುಪಿಎಸ್ ವ್ಯವಸ್ಥೆ ಮಾಡಲಾಗಿತ್ತು. ಎಸ್‌ಡಿಎಂಸಿ ಸದಸ್ಯರು, ಗ್ರಾಪಂ ಜನಪ್ರತಿನಿಧಿಗಳು, ವಿದ್ಯಾರ್ಥಿಗಳ ಪಾಲಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮ ವೀಕ್ಷಿಸಿದರು. ಬಡ ಕುಟುಂಬ ವಿದ್ಯಾರ್ಥಿಗೆ ಈ ಅದೃಷ್ಟ ಒಲಿದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಜನತೆ ಈ ಕಾರ್ಯಕ್ರಮ ಮೂಲಕ ಜಿಲ್ಲೆಯ ಗೌರವ ಹೆಚ್ಚಿಸಿದ ವಿದ್ಯಾರ್ಥಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂದೆಯೇ ಕೇಂದ್ರದ ತಂಡ ಶಾಲೆ ಭೇಟಿ ನೀಡಿ ವಿದ್ಯಾರ್ಥಿಯ ರಿಹರ್ಸಲ್ ನಡೆಸಿತ್ತು. ವಿದ್ಯಾರ್ಥಿಯ ಪ್ರಶ್ನೆಯನ್ನು ರೆಕಾರ್ಡ್ ಮಾಡಿಕೊಂಡು ಹೋಗಿತ್ತು. ಇದಕ್ಕೂ ಮುನ್ನವೇ ಶಾಲಾ ಶಿಕ್ಷಕರು ವಿದ್ಯಾರ್ಥಿಗೆ ತರಬೇತಿ ನೀಡಿದ್ದರು. ಈ ಕಾರ್ಯಕ್ರಮ ಗ್ರಾಮೀಣ ವಿದ್ಯಾರ್ಥಿಗಳ ಆತ್ಮವಿಶ್ವಾಸ ಇಮ್ಮಡಿಗೊಳಿಸಿದೆ. ಕೃಷ್ಣಕುಮಾರ್, ಮುಖ್ಯಶಿಕ್ಷಕ ತಾವರೆಕರೆ ಶಾಲೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net