

ಮೈಸೂರು: ದಕ್ಷಿಣದ ಪವಿತ್ರ ನದಿಗಳಾದ ಕಾವೇರಿ, ಕಪಿಲಾ, ಸ್ಫಟಿಕ ಸರೋವರ ಸಂಗಮವಾದ ತಿ.ನರಸೀಪುರದ ತಿರುಮಕೂಡಲು ಶ್ರೀಕ್ಷೇತ್ರದಲ್ಲಿ ೆ.10ರಿಂದ ಮೂರು ದಿನಗಳ ಕಾಲ 12ನೇ ಮಹಾ ಕುಂಭಮೇಳ ಜರುಗಲಿದೆ. ಈ ವೇಳೆ ವಾರಾಣಸಿ ವಾದರಿಯಲ್ಲಿ ದೀಪಾರತಿ ಕಾರ್ಯಕ್ರಮ ಇರಲಿದೆ.
ನಗರದ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಗುರುವಾರ ಆಯೋಜಿಸಿದ್ದ 12ನೇ ಕುಂಭಮೇಳದ ಪೂರ್ವಭಾವಿ ಸಭೆಯಲ್ಲಿ ದಿನಾಂಕವನ್ನು ಪ್ರಕಟಿಸಲಾಯಿತು.
ದಕ್ಷಿಣದಲ್ಲೂ ಮಹಾಕುಂಭ ಮೇಳ ನಡೆಯಬೇಕು ಎನ್ನುವ ವಿವಿಧ ಮಠಾಧಿಪತಿಗಳ ಆಶಯದಂತೆ 1989ರಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡಿತು. ಈ ಕುಂಭಮೇಳವನ್ನು ಪ್ರತಿ 3 ವರ್ಷಗಳಿಗೊಮ್ಮೆ ಹಮ್ಮಿಕೊಳ್ಳಲಾಗುತ್ತಿದೆ. 2019ರಲ್ಲಿ ನಡೆದಿತ್ತು. ಬಳಿಕ ಕೋವಿಡ್ ಸಮಯದಲ್ಲಿ ಜರುಗಿರಲಿಲ್ಲ. ಹೀಗಾಗಿ, 6 ವರ್ಷಗಳ ಬಳಿಕ ನಡೆಸಲಾಗುತ್ತಿದೆ. ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಮಠಾಧೀಶರ ಬಳಗ ಹಾಗೂ ಜಿಲ್ಲಾಡಳಿತದಿಂದ ಈಗಿನಿಂದಲೇ ಸಿದ್ಧತೆ ಶುರು ಮಾಡಲಾಗಿದೆ.
ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾತನಾಡಿ, ೆ.10 ರಂದು ಬೆಳಗ್ಗೆ 9ಕ್ಕೆ ಹಳೇ ತಿರುಮಕೂಡಲಿನ ಶ್ರೀ ಅಗಸ್ತ್ಯೇಶ್ವರ ಸನ್ನಿಧಿಂುಲ್ಲಿ ಅನುಜ್ಞೆ , ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ, ಸಂಜೆ 5 ಗಂಟೆಗೆ ಧರ್ಮ ಸಭೆ, ಸಾಂಸ್ಕೃತಿಕ ಕಾಂರ್ುಕ್ರಮಗಳ ಉದ್ಘಾಟನೆ ಮತ್ತು ಧ್ವಜಾರೋಹಣ ನಡೆಯಲಿದೆ ಎಂದು ತಿಳಿಸಿದರು.
ೆ.11ರಂದು ಬೆಳಗ್ಗೆ ಚತುರ್ದಶಿ, ನದಿಪಾತ್ರದಲ್ಲಿ ಪುಣ್ಯಾಹ ನವಗ್ರಹ ಹೋಮ, ಸುದರ್ಶನ ಹೋಮ, ಪುರ್ಣಾಹುತಿ. ಬೆ.11ಕ್ಕೆ ಧಾರ್ಮಿಕ ಸಭೆ ನಡೆಂುಲಿದೆ. ಸಂಜೆ 6ಕ್ಕೆ ಸುದರ್ಶನ ಪೂಜೆ, ಹೋಮ, ಪುರ್ಣಾಹುತಿ ನಡೆಂುಲಿದೆ. ಸಂಜೆ 4ಕ್ಕೆ ತಿ.ನರಸೀಪುರದ ಗುಂಜಾ ನರಸಿಂಹಸ್ವಾಮಿ ದೇವಸ್ಥಾನ, ವಿಶ್ವಕರ್ಮ ಬೀದಿ, ಭಗವಾನ್ ಟಾಕೀಸ್ ವೃತ್ತ, ಲಿಂಕ್ ರಸ್ತೆ, ಬಸ್ ನಿಲ್ದಾಣದ ಮೂಲಕ ತ್ರಿವೇಣಿ ಸಂಗಮಕ್ಕೆ ಮಂಗಳವಾದ್ಯ, ವೀರಗಾಸೆ, ಭಜನಾ ತಂಡಗಳು, ಕೊಂಬು-ಕಹಳೆ, ಕಳಸ ಹೊತ್ತ ಸುಮಂಗಲಿಂುರು, ಕಂಸಾಳೆ, ಪೂಜಾ ಕುಣಿತ, ವೀರಭದ್ರ ಕುಣಿತ, ಗಾರುಡಿ ಕುಣಿತ, ಕೋಲಾಟ, ವೀರಮಕ್ಕಳ ಕುಣಿತ, ಕೀಲುಕುದುರೆ, ಪಟ ಕುಣಿತ, ತಮಟೆ, ಬ್ಯಾಂಡ್‌ಸೆಟ್, ಸೇವಾದಳ ಮತ್ತು ಸ್ತಬ್ಧಚಿತ್ರಗಳೊಂದಿಗೆ ಕುಂಭಮೇಳದಲ್ಲಿ ಭಾಗವಹಿಸುವ ಸ್ವಾಮೀಜಿಗಳನ್ನು ಮೆರವಣಿಗೆಂುಲ್ಲಿ ಕರೆದೊಂ್ಯುಲಾಗುತ್ತದೆ. ಸಂಜೆ 7ಕ್ಕೆ ವಾರಾಣಸಿ ವಾದರಿಂುಲ್ಲಿ ದೀಪಾರತಿ ಕಾರ್ಯಕ್ರಮ ಇರಲಿದೆ ಎಂದರು.
ೆ.12ರಂದು ಬೆಳಗ್ಗೆ 5.30ಕ್ಕೆ ಚಂಡಿಹೋಮ, ಪೂರ್ಣಾಹುತಿ, ಕುಂಭೋಧ್ವಾಸನ ಹಾಗೂ ಸಪ್ತ ಪವಿತ್ರ ನದಿಗಳಿಂದ ತಂದ ತೀರ್ಥಗಳನ್ನು ತ್ರಿವೇಣಿ ಸಂಗಮದಲ್ಲಿ ಸಂಯೋಜಿಸುವುದು, ಪುಣ್ಯಸ್ನಾನ, ಧರ್ಮಸಭೆ ಏರ್ಪಡಿಸಲಾಗುವುದು. ಪ್ರಾತಃಕಾಲ 9.35ರಿಂದ 9.50ರ ಮೀನಲಗ್ನ, ಬೆಳಗ್ಗೆ 11.30ರಿಂದ 12 ಗಂಟೆಯ ವೃಷಭ ಲಗ್ನ, ಅಭಿಜಿನ್ ಮುಹೂರ್ತ, ವಿಧಿ ಹಾಗೂ ವೇದ ಮುಹೂರ್ತಗಳಲ್ಲಿ ಮಹೋದಂು ಪುಣ್ಯಸ್ನಾನ ನೆರವೇರಲಿದೆ ಎಂದು ಶ್ರೀಗಳು ವಿವರ ನೀಡಿದರು.
ೆ.10ರಂದು ಬೆಳಗ್ಗೆ 8.30ಕ್ಕೆ ಅಗಸ್ತ್ಯೇಶ್ವರಸ್ವಾಮಿ ಸನ್ನಿಧಿಂುಲ್ಲಿ ಅನುಜ್ಞಾ ಕಾಂರ್ುಕ್ರಮ ಉದ್ಘಾಟನಾ ಸವಾರಂಭ ಹಮ್ಮಿಕೊಳ್ಳಲಾಗುವುದು. ಅನೇಕ ಗಣ್ಯರು ಭಾಗವಹಿಸುವರು ಎಂದರು.
ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ತಿ.ನರಸೀಪುರ ಕ್ಷೇತ್ರದ ಶಾಸಕರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಿ ಸಮಾಲೋಚಿಸಬೇಕು. ಮೈಸೂರಿನವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪುಣ್ಯಸ್ನಾನ ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ಚರ್ಚೆಯಾಯಿತು. ಕುಂಭಮೇಳದ ಯಶಸ್ವಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.