

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಾದ್ಯಂತ 1,622 ಅಂಗನವಾಡಿ ಕೇಂದ್ರಗಳಲ್ಲಿ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜತೆಗೆ ಪೌಷ್ಠಿಕ ಆಹಾರ ಅಭಿಯಾನದ ಬಗ್ಗೆಯೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಧಿಕಾರಿ ದಿವ್ಯ ಪ್ರಭು ಹೇಳಿದರು.
ಇಲ್ಲಿನ ರಾಜೀವ ಗಾಂಽನಗರದ ಆತ್ಮಾನಂದ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆ ಸಹಯೋಗದಲ್ಲಿ ಜೂ. 16ರಿಂದ ಆರಂಭಗೊ0ಡಿರುವ ಅಭಿಯಾನ ಜು. 31ರವರೆಗೆ ನಡೆಯಲಿದೆ. ಅಂಗನವಾಡಿಗಳಲ್ಲಿ ತಾಯಂದಿರನ್ನು ಕರೆದು ಅವರಿಗೆ ಪೌಷ್ಠಿಕತೆ ಬಗ್ಗೆ ಅರಿವು ಮತ್ತು ಅಂಗನವಾಡಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಮಾತನಾಡಿ, ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಬಂದ ಕಿಟ್‌ಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. 18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಮದುವೆ ವಿಷಯ ಗೊತ್ತಾದರೆ ಅಽಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ಮಹಿಳಾ ಮತ್ತು ಮಕ್ಕಳ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಜಿಲ್ಲಾ ನಿರೂಪನಾಽಕಾರಿ ಡಾ. ಕಮಲಾ ಬೈಲೂರು, ಡಿಎಚ್‌ಒ ಡಾ. ಎಸ್.ಎಂ. ಹೊನಕೇರಿ, ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮೀ ಹಿಂಡಸಗೇರಿ, ಇತರರಿದ್ದರು. ಅಂಗನವಾಡಿ ಸಿಬ್ಬಂದಿ, ಗರ್ಭಿಣಿಯರು, ಬಾಣಂತಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.