

ತುಮಕೂರು: ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ 48ನೇ ಜನ್ಮದಿನದ ಅಂಗವಾಗಿ ಭಾನುವಾರ ತುಮಕೂರಿನಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.
ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಂ, ಸಂಸ್ಥೆಗಳ ಪದಾಧಿಕಾರಿಗಳು ಶಾಸಕ ಜಿ.ಬಿ.ಜ್ಯೋತಿಗಣೇಶ್ ಭೇಟಿಯಾಗಿ ಶುಭ ಕೋರಿದರು.
ನಗರದ ಟೌನ್ಹಾಲ್ನಲ್ಲಿರುವ ಶಾಸಕರ ಕಚೇರಿಯಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಜನರು ಜಮಾಯಿಸಿದ್ದರು, ಜ್ಯೋತಿಗಣೇಶ್ ಆಗಮನವಾದ ಕೂಡಲೇ ನೆಚ್ಚಿನ ನಾಯಕನಿಗೆ ಶುಭಾಶಯ ಕೋರಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಮಾನಿಗಳ ಬಳಗದಿಂದ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಪಾಲಿಕೆ ಸದಸ್ಯರು, ಬಿಜೆಪಿ ಸೇರಿ ವಿವಿಧ ಪಕ್ಷಗಳು ಮುಖಂಡರು, ಸಮಾಜದ ವಿವಿಧ ಗಣ್ಯರು ಆಗಮಿಸಿದ್ದರು.
ಪಾಲಿಕೆ ಆವರಣದಲ್ಲಿಯೇ ರಕ್ತದ ಗುಂಪು ಪರೀೆ, ನೇತ್ರದಾನ ನೋಂದಣಿ, ಕೃತಕ ಕೈ, ಕಾಲುಗಳ ವಿತರಣೆ, ಆಟೋ ಚಾಲಕರಿಗೆ ಸಮವಸ ವಿತರಣೆ, ಪೌರಕಾರ್ಮಿಕರಿಗೆ ಬಟ್ಟೆ ವಿತರಣೆ, ಅರ್ಹರಿಗೆ ಕರೊನಾ ಲಸಿಕೆ ಬೂಸ್ಟರ್ ಡೋಸ್ ವಿತರಣೆ ಸೇರಿ ಹಲವು ಸೇವಾ ಕಾರ್ಯಗಳು ನಡೆದವು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಇಂತಹ ಅದ್ದೂರಿ ಕಾರ್ಯಕ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮುಜುಗರವೆನಿಸುತ್ತದೆ. ಒಬ್ಬ ಜನಪ್ರತಿನಿಧಿಯಾಗಿ ನನ್ನ ಕೈಲಾದ ಸಹಾಯ ಮತ್ತು ಸಹಕಾರ ಮಾಡಿದ್ದೇನೆ ಎಂದರು.
ಸ್ಮಾರ್ಟ್ಸಿಟಿ ಮತ್ತು ಇತರ ಅನುದಾನಗಳ ಜತೆಗೆ ಸರ್ಕಾರದಿಂದ ಬಿಡುಗಡೆಯಾದ 25 ಕೋಟಿ ರೂ. 40 ಕೋಟಿ ರೂ. ಮತ್ತು 56 ಕೋಟಿ ರೂ. ಅನುದಾನದಲ್ಲಿ ಕುಡಿಯುವ ನೀರು, ಒಂದು ಬಡಾವಣೆಯಿಂದ ಮತ್ತೊಂದು ಬಡಾವಣೆ ಹಾಗೂ ಮುಖ್ಯರಸ್ತೆಗಳಿಗೆ ಲಿಂಕ್ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿ ಕೈಗೆತ್ತಿಕೊಂಡು ಕಾರ್ಯನಿರ್ವಹಿಸಿದ್ದೇನೆ ಎಂದರು.
ಕರೊನಾದಿಂದಾಗಿ ಕಳೆದ ಎರಡು ವರ್ಷ ಅಂತಹ ಕಾಮಗಾರಿಗಳು ನಡೆದಿಲ್ಲ, ಶಿಕ್ಷಣ, ಆರೋಗ್ಯ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡಲಾಗಿದೆ. ಅಲ್ಲದೆ ಸರ್ಕಾರದ ಸವಲತ್ತುಗಳು ಅರ್ಹರ ಮನೆ ಬಾಗಿಲಿಗೆ ತಲುಪುವಂತೆ ಮಾಡಿದ್ದೇನೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಮೇಯರ್ ಬಿ.ಜಿ.ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನಯ್ಯ, ಮಂಜುಳ, ಮುಖಂಡರಾದ ಕೊಪ್ಪಲ್ ನಾಗರಾಜು, ಹನುಂತರಾಜು ಇದ್ದರು.
ಜ್ಯೋತಿಗಣೇಶ್ ಅವಧಿಯಲ್ಲಿ ಅಭಿವೃದ್ಧಿಗೆ ವೇಗ: ಶಾಸಕರು ಸರಳ ಸಜ್ಜನಿಕೆಗೆ ಹೆಸರಾದವರು, ಕಾರ್ಮಿಕರ ದಿನದಂದು ಶ್ರಮಜೀವಿಗಳಿಗೆ ಸಹಾಯ ಮಾಡುವ ಮೂಲಕ ಅವರ ಅಭಿಮಾನಿಗಳು ಶಾಸಕರ ಹುಟ್ಟು ಹಬ್ಬವನ್ನು ಸಾರ್ಥಕಗೊಳಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಹೇಳಿದರು.
ತುಮಕೂರು ನಗರದ ಅಭಿವೃದ್ಧಿಗೆ ಹಲವು ಶಾಸಕರು ಕೆಲಸ ಮಾಡಿದ್ದಾರೆ. ಆದರೆ, ಜಿ.ಬಿ.ಜ್ಯೋತಿಗಣೇಶ್ ಅವರು ಶಾಸಕರಾದ ನಂತರ ಅಭಿವೃದ್ಧಿ ವೇಗ ಪಡೆದುಕೊಂಡಿತ್ತು. ಇದರ ಫಲವಾಗಿ ರಸ್ತೆ, ಕುಡಿಯುವ ನೀರಿನ ಸಮರ್ಪಕ ಹಂಚಿಕೆ ಸೇರಿದಂತೆ ಹಲವು ಸಮಸ್ಯೆಗಳು ಬಗೆಹರಿದಿವೆ ಎಂದರು.
ನೂತನ ಕ್ರೀಡಾಂಗಣ, ಶಾಲಾ&ಕಾಲೇಜುಗಳಿಗೆ ಹೊಸ ಕಟ್ಟಡ ನಿರ್ಮಾಣ ಹೀಗೆ ಹಲವು ಅಗತ್ಯ ಕಾಮಗಾರಿಗಳನ್ನು ಕೈಗೊಂಡು ಉತ್ತಮ ನಗರವಾಗಿ ರೂಪಿಸಿದ್ದಾರೆ. ಅವರ ಸೇವೆ ನಿರಂತರವಾಗಿ ಹತ್ತಾರು ವರ್ಷ ದೊರೆಯುವಂತಾಗಬೇಕು ಎಂದು ಹೇಳಿದರು.
ನನ್ನ ಜನ್ಮದಿನದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತಷ್ಟು ಸಲವತ್ತು ವಿತರಿಸಲು ಸಹಕರಿಸಿದ ನಮ್ಮೆಲ್ಲಾ ಸ್ನೇಹಿತರು, ಅಭಿಮಾನಿ ಬಳಗಕ್ಕೆ ಹಾಗೂ ಸಹಕರಿಸಿದ ಜನರಿಗೆ ಕೃತತೆ ಸಲ್ಲಿಸುತ್ತೇನೆ. ನಿಮ್ಮೆಲ್ಲರ ಪ್ರೀತಿ ನನ್ನ ಜವಾಬ್ದಾರಿ ಹೆಚ್ಚಿಸಿದ್ದು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ಪ್ರೇರಣೆಯಾಗಿದೆ. > ಜಿ.ಬಿ.ಜ್ಯೋತಿಗಣೇಶ್ ಶಾಸಕ