ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷೃ ಸಲ್ಲದು

18 HANUR 1
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ತೆರಿಗೆ ವಸೂಲಾತಿಯಲ್ಲಿ ಹನೂರು ತಾಲೂಕು ಜಿಲ್ಲೆಯಲ್ಲಿ ಕೊನೇ ಸ್ಥಾನದಲ್ಲಿದೆ. ಆದ್ದರಿಂದ ಪ್ರತಿಯೊಬ್ಬರೂ ತೆರಿಗೆ ವಸೂಲಾತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಉಮೇಶ್ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ತೆರಿಗೆ ವಸೂಲಾತಿ, ಸ್ವಚ್ಛ ಭಾರತ್ ಮಿಷನ್, ನರೇಗಾ ಹಾಗೂ ವಸತಿ ಯೋಜನೆ ಸಂಬಂಧ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ತೆರಿಗೆ ವಸೂಲಾತಿ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಪಿಡಿಒಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಆದರೆ, ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಪರಿಣಾಮ ವಸೂಲಾತಿಯಲ್ಲಿ ಜಿಲ್ಲೆಯಲ್ಲಿ ತೀರಾ ಹಿಂದುಳಿದಿದೆ. ಈ ಬಗ್ಗೆ ಆಡಳಿತಾಧಿಕಾರಿ ಲಕ್ಷ್ಮೀ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಸಮರ್ಪಕ ತೆರಿಗೆ ವಸೂಲಾತಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರತಿಯೊಬ್ಬರೂ ತೆರಿಗೆ ವಸೂಲಾತಿಗೆ ಮುಂದಾಗಬೇಕು. ಮನೆ ಮನೆಗೆ ತೆರಳಿ ತೆರಿಗೆ ಸಂಗ್ರಹಿಸಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈಗಾಗಲೇ ಗ್ರಾಮ ಪಂಚಾಯಿತಿವಾರು ವಿವಿಧ ವಸತಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಕೈಗೊಂಡಿರುವ ಮನೆ ನಿರ್ಮಾಣ ಕಾಮಗಾರಿ ಪ್ರಗತಿ ಬಗ್ಗೆ ಪಟ್ಟಿ ನೀಡುವಂತೆ ಸೂಚಿಸಲಾಗಿತ್ತು. ಈವರೆಗೂ ಯಾರೊಬ್ಬರೂ ಸಲ್ಲಿಸಿಲ್ಲ. ಇತ್ತ ತೆರಿಗೆ ವಸೂಲಾತಿಯೂ ಸಮರ್ಪಕವಾಗಿ ಆಗುತ್ತಿಲ್ಲ. ಹಾಗಾದರೆ ಗ್ರಾಪಂನಲ್ಲಿ ಪ್ರತಿದಿನ ಏನು ಕೆಲಸ ಮಾಡುತ್ತಿದ್ದೀರಿ? ಕಚೇರಿಯಲ್ಲಿ ಕೂರುವ ಬದಲು ಹೊರಗೆ ಬಂದು ಹೆಚ್ಚು ಕೆಲಸ ಮಾಡಿ. ತೆರಿಗೆ ವಸೂಲಾತಿ ಜತೆಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ. ಪಡೆಯುವ ಸಂಬಳಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಸ್ವಚ್ಛ ಭಾರತ್ ಮಿಷನ್‌ನ ಜಿಲ್ಲಾ ಸಂಯೋಜಕ ಮನು ಮಾತನಾಡಿ, ತಾಲೂಕಿನಲ್ಲಿ 49 ಸಾವಿರ ಕುಟುಂಬಗಳಿದ್ದು, ಇದರಲ್ಲಿ 40 ಸಾವಿರ ಕುಟುಂಬಗಳು ಶೌಚಗೃಹವನ್ನು ಹೊಂದಿವೆ. ಇನ್ನುಳಿದ 9,438 ಕುಟುಂಬಗಳಿಗೆ ಶೌಚಗೃಹಗಳಿಲ್ಲ. ಹಾಗಾಗಿ ಈ ಯೋಜನೆಯಲ್ಲಿ ಪ್ರಗತಿ ಕಂಡಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಿ ಪ್ರತಿ ಕುಟುಂಬವೂ ಶೌಚಗೃಹ ಹೊಂದುವಂತಾಗಬೇಕು ಎಂದು ತಿಳಿಸಿದರು.

ತಾಪಂ ಎಡಿ ರಾಧಾ, ಪಿಡಿಒಗಳು, ಕಾರ್ಯದರ್ಶಿಗಳು, ಕಂಪ್ಯೂಟರ್ ಆಪರೇಟರ್‌ಗಳು ಹಾಗೂ ಕಚೇರಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net