

ಕಲಬುರಗಿ: ಜಿಲ್ಲೆಯಲ್ಲಿ ಸುಮಾರು ೨ ಲಕ್ಷಕ್ಕೂ ಹೆಚ್ಚಿನ ತೊಗರಿ ಬೆಳೆ ದಿಢೀರ್ ಒಣಗಿದ್ದು, ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ಡಿ.೧೩ರಂದು ರೈತರ ನಿಯೋಗದೊಂದಿಗೆ ಬೆಳಗಾವಿಗೆ ತೆರಳಿ, ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾಹಿತಿ ನೀಡಿದರು.
ಉತ್ತಮ ಮಳೆ ಆಗಿದ್ದರಿಂದ ಜಿಲ್ಲೆಯಲ್ಲಿ ೬.೫ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತಲಾಗಿತ್ತು. ಪ್ರಸ್ತುತ ತೇವಾಂಶದ ಕಾರಣಕ್ಕೆ ದಿಢೀರ್ ತೊಗರಿ ಬೆಳೆ ಒಣಗಿ ನಿಂತ್ತಿದೆ. ಇದರಿಂದ ಸಾವಿರಾರು ರೈತರು ಬೀದಿಗೆ ಬರುವಂತಾಗಿದೆ. ಕೂಡಲೇ ಸರ್ಕಾರ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಸರ್ಕಾರವಿದ್ದಾಗ ನೆಟೆ ಹೋದಾಗ ತೊಗರಿ ಹಿಡಿದು ಪ್ರತಿಭಟಿಸಿದ್ದ ಕಾಂಗ್ರೆಸ್ ನಾಯಕರು ಇದೀಗ ಸರ್ಕಾರ ಅವರz್ದÉÃ ಇದ್ದರೂ ಸ್ಪಂದಿಸುತ್ತಿಲ್ಲ. ಸರ್ಕಾರದಿಂದ ಕಳೆದ ಒಂದು ತಿಂಗಳ ಹಿಂದೆ ಸಮೀಕ್ಷೆ ನಡೆಸುವುದಾಗಿ ಹೇಳಿಕೆ ನೀಡುತ್ತಿದ್ದು, ಸಮೀಕ್ಷೆಯ ಫಲಿತಾಂಶ, ವರದಿ ಏನಿದೆ ಎಂಬುದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಎಕರೆಗೆ ೨೫,೦೦೦ ರೂ. ಪರಿಹಾರ ಘೋಷಿಸಬೇಕು. ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಬೆಳಗಾವಿ ಸುವರ್ಣ ಸೌಧದಲ್ಲಿ ಕೃಷಿ ಸಚಿವರಿಗೆ ೪೬ ರೈತರ ನಿಯೋಗದೊಂದಿಗೆ ಭೇಟಿ ಮಾಡಲಾಗುವುದು ಎಂದು ಹೇಳಿದರು.
ಸಂಘಟನೆ ಎಂ.ಬಿ.ಸಜ್ಜನ್, ಸಹ ಕಾರ್ಯದರ್ಶಿ ದಿಲೀಪ್ ನಾಗೂರೆ, ರಾಮಪ್ಪ ಹುರಮುಂಜಿ ಇದ್ದರು.