

ಬೀದರ್: ಕ್ವಿಂಟಾಲ್ ತೊಗರಿಗೆ ರೂ. 8 ಸಾವಿರ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಒತ್ತಾಯಿಸಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಅಧಿಕ ಬೆಲೆ ಇರುವ ಕಾರಣ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಮಾರಾಟಕ್ಕೆ ರೈತರು ಮುಂದೆ ಬರುತ್ತಿಲ್ಲ. ಬೀದರ್ ಜಿಲ್ಲೆಯಲ್ಲಿ 126 ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದೆ. 20 ಸಾವಿರಕ್ಕೂ ಅಧಿಕ ರೈತರು ಹೆಸರು ನೋಂದಣಿ ಮಾಡಿದ್ದಾರೆ. ಆದರೆ ಒಂದು ಕ್ವಿಂಟಾಲ್ ತೊಗರಿ ಸಹ ಇಲ್ಲಿ ಕೊಟ್ಟಿಲ್ಲ. ಸರ್ಕಾರ ಬೆಂಬಲ ಬೆಲೆ 8 ಸಾವಿರಕ್ಕೇರಿಸಬೇಕೆಂದು ಆಗ್ರಹಿಸಿ ಗಮನ ಸೆಳೆದರು.